ಸರ್ಕಾರದಿಂದ ಕಾವೇರಿ ನದಿಗೆ ಕೊರೊನಾ ಮೃತರ ಅಸ್ಥಿ ವಿಸರ್ಜನೆ!

Date:

ಬೆಂಗಳೂರು, ಜೂನ್ 2: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟವರ ಚಿತಾಭಸ್ಮವನ್ನು ತೆಗೆದುಕೊಂಡು ಹೋಗುವದಕ್ಕೂ ಜನರು ಭಯ ಪಡುವಂತಾ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆ ಬುಧವಾರ ಸ್ವತಃ ಕಂದಾಯ ಸಚಿವ ಆರ್ ಅಶೋಕ್ ಮೃತ ಅಸ್ಥಿ ವಿಸರ್ಜನೆ ಮಾಡಲಿದ್ದಾರೆ.

 

ಕೊವಿಡ್-19 ಸೋಂಕಿನಿಂದ ಮೃತಪಟ್ಟ 1,000 ಜನರ ಅಸ್ಥಿಯನ್ನು ಸರ್ಕಾರದ ವತಿಯಿಂದ ಅಸ್ಥಿ ವಿಸರ್ಜನೆ ಕಾರ್ಯ ನಡೆಸಲಾಗುತ್ತಿದೆ. ಬುಧವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಳವಾಡಿಯ ಅನ್ನಪೂರ್ಣೇಶ್ವರಿ ಹಾಗೂ ಕಾಶಿ ವಿಶ್ವನಾಥ ದೇವಸ್ಥಾನದ ಬಳಿ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಲಾಗುತ್ತದೆ.

ಸಾಮಾನ್ಯವಾಗಿ ಮೃತರ ಅಂತ್ಯಸಂಸ್ಕಾರದ ನಂತರದಲ್ಲಿ ಅಸ್ಥಿಯನ್ನು ಹರಿಯುವ ನದಿಯಲ್ಲಿ ವಿಸರ್ಜಿಸಿದರೆ ಮೃತ ಆತ್ಮಕ್ಕೆ ಮುಕ್ತಿ ಸಿಗುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಸರ್ಕಾರದ ವತಿಯಿಂದಲೇ ಕಂದಾಯ ಸಚಿವ ಆರ್ ಅಶೋಕ್ ಅಸ್ಥಿ ವಿಸರ್ಜಿಸಲಿದ್ದಾರೆ.

ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟವರ ಚಿತಾಭಸ್ಮವನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಸಂಬಂಧಿಕರಿಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಸಾಮಾನ್ಯವಾಗಿ ಮೃತರ ಅಂತ್ಯಕ್ರಿಯೆ ನಡೆದ ದಿನ ಅಥವಾ ಮರುದಿನವೇ ಚಿತಾಭಸ್ಮವನ್ನು ತೆಗೆದುಕೊಂಡು ಹೋಗಿದ್ದಾರೆ. ಆದರೆ ಕೆಲವು ಪ್ರಕರಣಗಳಲ್ಲಿ ಸಂಬಂಧಿಕರು ಅಸ್ಥಿಯನ್ನು ತೆಗೆದುಕೊಂಡು ಹೋಗುವುದಕ್ಕೂ ಹಿಂದೇಟು ಹಾಕಿದ್ದರು. ಹೀಗಾಗಿ 1200 ಮೃತರ ಚಿತಾಭಸ್ಮವನ್ನು ಹಾಗೇ ಶೇಖರಿಸಿ ಇಡಲಾಗಿತ್ತು. ಬುಧವಾರ ಮೃತರ ಆತ್ಮಕ್ಕೆ ಮುಕ್ತಿ ದೊರಕಿಸುವ ಉದ್ದೇಶದಿಂದ ಸರ್ಕಾರವೇ ಅಸ್ಥಿ ವಿಸರ್ಜನೆಗೆ ಮುಂದಾಗಿದೆ.

Share post:

Subscribe

spot_imgspot_img

Popular

More like this
Related

ಹಿಂದೂ ಧರ್ಮವು ಪೂಜಾ, ಆಚರಣೆಗಳಷ್ಟೇ ಅಲ್ಲ; ಅದು ಒಂದು ಜೀವನ ಶೈಲಿ: ಮೋಹನ್ ಭಾಗವತ್

ಹಿಂದೂ ಧರ್ಮವು ಪೂಜಾ, ಆಚರಣೆಗಳಷ್ಟೇ ಅಲ್ಲ; ಅದು ಒಂದು ಜೀವನ ಶೈಲಿ:...

ವಯೋವೃದ್ಧ ಗಜೇಂದ್ರನಿಗೆ ಶಿಬಿರಕ್ಕೆ ಸ್ಥಳಾಂತರಕ್ಕೆ ಈಶ್ವರ್ ಖಂಡ್ರೆ ಸೂಚನೆ

ವಯೋವೃದ್ಧ ಗಜೇಂದ್ರನಿಗೆ ಶಿಬಿರಕ್ಕೆ ಸ್ಥಳಾಂತರಕ್ಕೆ ಈಶ್ವರ್ ಖಂಡ್ರೆ ಸೂಚನೆ ಚಾಮರಾಜನಗರ: ಹಲವು ದಸರಾ...

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ ಬೆಂಗಳೂರು: 2026ರ...

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ ಔಟ್?

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ...