ಸರ್ಕಾರದ ಒಂದೇ ಒಂದು ಆದೇಶದಿಂದ ಖಾಸಗಿ ಶಾಲೆಗಳಿಗೆ ದುಸ್ಥಿತಿ

0
29

ಒಂದೆಡೆ ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆ ತೆರೆಯಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮತ್ತೊಂದೆಡೆ ಶಾಲಾ ಶುಲ್ಕ ವಿಚಾರವಾಗಿ ಖಾಸಗಿ ಶಾಲೆಗಳು ಹಾಗೂ ಪೋಷಕರ ನಡುವೆ ಘರ್ಷಣೆಗೆ ನಾಂದಿ ಹಾಡುವ ಆದೇಶವನ್ನು ಶಿಕ್ಷಣ ಇಲಾಖೆ ಹೊರಡಿಸಿದೆ. ಇದು ಮತ್ತೆ ರಾಜ್ಯದಲ್ಲಿ ಶಾಲಾ ಶುಲ್ಕ ವಿವಾದಕ್ಕೆ ನಾಂದಿ ಹಾಡಿದೆ.

ಖಾಸಗಿ ಶಾಲೆಗಳಲ್ಲಿ ಓದಿರುವ ಮಕ್ಕಳಿಗೆ ಶಾಲ ಶುಲ್ಕ ಪಾವತಿ ಮಾಡದಿದ್ದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವರ್ಗಾವಣೆ ಪತ್ರ ಪಡೆಯಲು ಅವಕಾಶ ಕಲ್ಪಿಸಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೂಚಿಸಿದ್ದಾರೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರ ಈ ಸೂಚನೆ ಮತ್ತೆ ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.

ಖಾಸಗಿ ಶಾಲೆಗಳಲ್ಲಿ ಓದಿರುವ ಮಕ್ಕಳಿಗೆ ಅವರು ಬಯಸಿದರೆ ಕಡ್ಡಾಯವಾಗಿ ವರ್ಗಾವಣೆ ಪತ್ರವನ್ನು ಕೊಡಬೇಕು. ಶಾಲಾ ಶುಲ್ಕ ಬಾಕಿ ಉಳಿಸಿಕೊಂಡಿದ್ದರೆ, ಪೊಲೀಸ್ ದೂರು ಕೊಟ್ಟು ಖಾಸಗಿ ಶಿಕ್ಷಣ ಸಂಸ್ಥೆಗಳು ಶುಲ್ಕ ವಸೂಲಿ ಮಾಡಲಿ. ಆದರೆ ವರ್ಗಾವಣೆ ಪತ್ರವನ್ನು ಬಯಸಿದರೆ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಕೊಡಬೇಕು ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವರ್ಗಾವಣೆ ಪತ್ರ ಪಡೆದು ಶಾಲಾ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ವರ್ಗಾವಣೆ ಪತ್ರ ಕೊಡುವ ಪ್ರಕ್ರಿಯೆ ಸದ್ದಿಲ್ಲದೆ ಆರಂಭವಾಗಿದೆ. ಶಿಕ್ಷಣ ಇಲಾಖೆಯ ಈ ಆದೇಶದ ವಿರುದ್ಧ ಖಾಸಗಿ ಶಿಕ್ಷಣ ಸಂಸ್ಥೆಗಳು ತಿರುಗಿ ಬಿದ್ದಿವೆ.

LEAVE A REPLY

Please enter your comment!
Please enter your name here