ಸರ್ಕಾರದ ಮೊದಲ ವಿಕೆಟ್ ಪತನ: ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಲು ಸಿಎಂ ಸೂಚನೆ

Date:

ಬೆಂಗಳೂರು ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ. ನಾಗೇಂದ್ರ ಅವರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ಸೂಚಿಸಿದ್ದಾರೆ. ಹಗರಣ ಸಂಬಂಧ ಗುರುವಾರರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ನಡೆಸಿದ್ದರು.
ಸಭೆಯಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಸರ್ಕಾರಕ್ಕೆ ಮುಖಭಂಗವಾಬಾರದು ಹೀಗಾಗಿ ಬಿ.ನಾಗೇಂದ್ರ ರಾಜಿನಾಮೆ ನೀಡುವುದು ಒಳಿತು. ತನಿಖೆ ಪೂರ್ಣವಾದ ಬಳಿಕ ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತೀರ್ಮಾನ ಕೈಗೊಂಡರು.
ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ, ಖುದ್ದು ತಾವೇ ಹೇಳಿಕೆ ನೀಡಿ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ. ಬಿ. ನಾಗೇಂದ್ರ ಅವರು ರಾಜಿನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿತ್ತು. ಈ ಹಿನ್ನೆಲೆ ಸರ್ಕಾರದ ಮೇಲೆ ಒತ್ತಡ ಸೃಷ್ಠಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ರಾಜಿನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...