ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ನೇತೃತ್ವದಲ್ಲಿ ನಡೆದ ಬೆಂಗಳೂರಿನ ವಾಹನ ದಟ್ಟಣೆ ಸಮಸ್ಯೆ ಪರಿಹಾರ ಕುರಿತಾದ ಸಭೆಯಲ್ಲಿ ಸಿಎಂ ಪುತ್ರ ವಿಜಯೇಂದ್ರ ಭಾಗಿಯಾಗಿದ್ದಾರೆ.

ವಿಜಯೇಂದ್ರ ಅವರು ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪ ಹಿಂದಿನಿಂದಲೂ ಇದೆ. ಹಿಂದೆ ಆರೋಪ ಕೇಳಿ ಬಂದ ಸಂದರ್ಭದಲ್ಲಿ ಆಡಳಿತದಿಂದ ಅಂತರ ಕಾಯ್ದುಕೊಂಡಿದ್ದ ವಿಜಯೇಂದ್ರ ಮತ್ತೆ ಆಡಳಿತದಲ್ಲಿ ಹಸ್ತಕ್ಷೇಪ ನಡೆಸಿದ್ದಾರೆ ಎಂದು ಹೇಳಲಾಗಿದೆ.






