ಜುಲೈ 29ರಂದು ನಡೆಯಬೇಕಿದ್ದ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ರಾಜ್ಯ ಸರ್ಕಾರ ಮುಂದೂಡಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಚುನಾವಣೆ ಮುಂದೂಡಿ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಹೊರಡಿಸಿರುವ ಆದೇಶವನ್ನು ರದ್ದುಪಡಿಸಬೇಕು ಹಾಗೂ ಚುನಾವಣಾ ಪ್ರಕ್ರಿಯೆಯನ್ನು ಮುಂದುವರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ರೇವಣ್ಣ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಈ ಅರ್ಜಿಯ ವಿಚಾರಣೆ ಇನ್ನೂ ನಡೆಯಬೇಕಿದ್ದು, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ, ಸಹಕಾರ ಸಂಘಗಳ ರಿಜಿಸ್ಟ್ರಾರ್, ಚುನಾವಣಾಧಿಕಾರಿ ಸೇರಿದಂತೆ ಹಲವರನ್ನು ರೇವಣ್ಣನವರ ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿಸಲಾಗಿದೆ