ಸರ್ಕಾರವನ್ನು ಟೀಕಿಸುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಕೆಲಸವಿಲ್ಲ ಎಂದ ಡಿಸಿಎಂ ಪರಮೇಶ್ವರ್

Date:

ಬಿಜೆಪಿಯವರಿಗೆ ಸಮ್ಮಿಶ್ರ ಸರಕಾರವನ್ನು ಟೀಕೆ ಮಾಡುವುದು ಬಿಟ್ಟರೆ ಬೇರೆ ಏನೂ ಕೆಲಸವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಬಿಜೆಪಿ ವಿರುದ್ಧ ಹರಿಹಾಯ್ದರು.ಸೈನ್ಸ್ ಸಿಟಿ ಯೋಜನೆ ಸ್ಥಳ ಪರಿಶೀಲನೆಗೆಂದು ಸೋಮವಾರ ಸುತ್ತೂರಿಗೆ ಭೇಟಿ ನೀಡಿದ್ದ ಅವರು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿ ಗ್ರಾಮ ವಾಸ್ತವ್ಯದ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಾರೆ. ಇದನ್ನು ಏಕೆ ಮಾಡುತ್ತಿದ್ದಾರೆ ಎಂಬುದನ್ನೇ ಅರ್ಥಮಾಡಿಕೊಳ್ಳುತ್ತಿಲ್ಲ, ಗ್ರಾಮ ವಾಸ್ತವ್ಯದಿಂದ ಗ್ರಾಮಗಳ ಅಭಿವೃದ್ದಿಯಾಗುತ್ತದೆ. ಮತ್ತು ಅಲ್ಲಿನ ಸಮಸ್ಯೆಗಳು ಪರಿಹಾರವಾಗುತ್ತದೆ. ಜನರ ಆಶಯಕ್ಕಾಗಿ ಗ್ರಾಮವಾಸ್ತವ್ಯ ಮಾಡಲಾಗುತ್ತಿದೆ. ಗ್ರಾಮ ವಾಸ್ತವ್ಯ ಆಗಬಹುದು, ಪಾದಯಾತ್ರೆಯಾಗಬಹುದು. ಯಾವುದನ್ನೂ ಬಿಜೆಪಿಯವರು ಸಹಿಸಿಕೊಳ್ಳುವುದಿಲ್ಲ ಎಂದು ಕಿಡಿಕಾರಿದರು.

ನನಗೇನೂ ಮಧ್ಯಂತರ ಚುನಾವಣೆ ನಡೆಯುತ್ತದೆ ಎಂದು ಅನಿಸುತ್ತಿಲ್ಲ. ನಾವು ಸಮ್ಮಿಶ್ರ ಸರಕಾರ ಮಾಡಿದ್ದೇವೆ. ನಮ್ಮ ಉದೇಶ ಐದು ವರ್ಷ ಉತ್ತಮ ಆಡಳಿತ ನಡೆಸುವ ಮೂಲಕ ಕರ್ನಾಟಕವನ್ನು ಅಭಿವೃದ್ದಿಪಡಿಸುವುದು. ಸಣ್ಣ ಪುಟ್ಟ ವ್ಯತ್ಯಾಸಗಳು ಹಾಗೂ ಹೇಳಿಕೆಗಳು ಅವರವರ ವೈಯಕ್ತಿಕ. ಒಂದು ರಾಷ್ಟ್ರೀಯ ಪಕ್ಷ ಪ್ರಾದೇಶಿಕ ಪಕ್ಷದ ಜೊತೆ ಅಧಿಕಾರ ನಡೆಸಿದರೆ ಇಂತಹ ಗೊಂದಲ ಸಹಜ ಎಂದು ಹೇಳಿದರು

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...