ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್ ಅಗತ್ಯ ಇಲ್ಲ. ನಮ್ಮಲ್ಲಿ ಎಲ್ಲಾ ಸೌಲಭ್ಯಗಳಿವೆ: ದಿನೇಶ್ ಗುಂಡೂರಾವ್

Date:

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್ ಅಗತ್ಯ ಇಲ್ಲ. ನಮ್ಮಲ್ಲಿ ಎಲ್ಲಾ ಸೌಲಭ್ಯಗಳಿವೆ: ದಿನೇಶ್ ಗುಂಡೂರಾವ್

ರಾಯಚೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್ ಅಗತ್ಯ ಇಲ್ಲ. ನಮ್ಮಲ್ಲಿ ಎಲ್ಲಾ ಸೌಲಭ್ಯಗಳಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ರಾಯಚೂರು ಜಿಲ್ಲೆ ಸೇರಿ ಈ ಭಾಗದಲ್ಲಿ 43 ರಿಂದ 44 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಹೋಗುತ್ತದೆ. ಮಧ್ಯಾಹ್ನ ಸಮಯದಲ್ಲಿ ಮನೆಯೊಳಗೆ ಅಥವಾ ಕಚೇರಿಯೊಳಗೆ ಇರುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
ಶಾಲೆಗಳು, ಎಲ್ಲಾ ಸಂಸ್ಥೆಗಳು ಆ ಬಗ್ಗೆ ಗಮನ ಕೊಡಬೇಕು. ಆಹಾರದ ಬಗ್ಗೆಯೂ ಗಮನ ಕೊಡಬೇಕು. ಆಗಾಗ ನೀರು ಕುಡಿದರೆ ನಿರ್ಜಲೀಕರಣದಿಂದ ದೂರ ಇರಬಹುದು. ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್ ಅಗತ್ಯ ಇಲ್ಲ. ನಮ್ಮಲ್ಲಿ ಎಲ್ಲಾ ಸೌಲಭ್ಯಗಳಿವೆ ಎಂದು ತಿಳಿಸಿದರು.
ಸರ್ಕಾರಿ ನೌಕರರು ಹೊರಗಡೆ ವೀಕ್ಷಣೆಯನ್ನು ಮಧ್ಯಾಹ್ನ 12 ರಿಂದ 3ರ ವರೆಗೆ ಮಾಡಬಾರದು. ಬೆಳಗಿನ ಜಾವ ಅಥವಾ ಸಾಯಂಕಾಲ ಮಾಡಬೇಕು. ಸರ್ಕಾರ ರಜೆ ಕೊಡಬೇಕು ಅಂತ ಹೇಳುವುದಿಲ್ಲ, ಸಮಯ ಬದಲಾವಣೆ ಮಾಡಿಕೊಂಡರೆ ಒಳ್ಳೆಯದು ಎಂದರು.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...