ಸರ್ಕಾರಿ ನೌಕರರಿಗೆ ವರ್ಕ್ ಫ್ರಮ್ ಹೋಮ್ ಇರುತ್ತಾ?

1
56

ಕೋವಿಡ್ ಹಾಗೂ ಒಮಿಕ್ರಾನ್ ನಿಯಂತ್ರಣಕ್ಕೆ ರಾಜ್ಯ ಸರಕಾರ ಬಿಗಿ ನಿಯಮ ಜಾರಿಗೊಳಿಸಿದ್ದರೂ, ಸರಕಾರಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವುದು ಕಡ್ಡಾಯವಾಗಿದೆ.

ಸರಕಾರಿ ನೌಕರರಿಗೆ ವರ್ಕ್ ಫ್ರಂ ಹೋಂ ಸೂತ್ರ ಈ ಬಾರಿ ಅನ್ವಯವಾಗುವುದಿಲ್ಲ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶದಲ್ಲಿ ಸ್ಪಷ್ಟವಾಗಿದೆ.

ಸಚಿವಾಲಯದಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ವೃಂದದ ಅಧಿಕಾರಿ ಹಾಗೂ ಸಿಬ್ಬಂದಿ ಪ್ರತಿ ದಿನ ಕಚೇರಿಗೆ ಹಾಜರಾಗಲೇಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಅನ್ಯ ಇಲಾಖೆಯಲ್ಲಿ ಮುಖ್ಯಸ್ಥರು ಹಾಗೂ ಗ್ರೂಪ್ ಎ ದರ್ಜೆ ಅಧಿಕಾರಿಗಳು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಬಿ, ಸಿ, ಡಿ ದರ್ಜೆ ಸಿಬ್ಬಂದಿ ೫೦ : ೫೦ ರೊಟೇಶನ್ ಆಧಾರದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು.ದೃಷ್ಟಿಹೀನ, ಅಂಗವಿಕಲ, ಗರ್ಭಿಣಿಯರು, ಆರೋಗ್ಯ ಸಮಸ್ಯೆ ಇರುವವರಿಗೆ ಮಾತ್ರ ಕಚೇರಿಗೆ ಬಂದು ಕರ್ತವ್ಯ ನಿರ್ವಹಿಸದೇ ಇರುವುದಕ್ಕೆ ವಿನಾಯಿತಿ ನೀಎಲಾಗಿದೆ ಎಂದು ಸರಕಾರಿ ಆದೇಶ ಸ್ಪಷ್ಟಪಡಿಸಿದೆ.

1 COMMENT

LEAVE A REPLY

Please enter your comment!
Please enter your name here