ಸರ್ಕಾರ ಎಸ್ʼಐಟಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ !

Date:

ಬೆಂಗಳೂರು: ಪ್ರಜ್ವಲ್ ಮಾಜಿ ಕಾರು ಚಾಲಕನಿಗೆ ನ್ಯಾಯಾಲಯ ಜಾಮೀನು ನಿರಾಕರಿಸಿದ್ದರೂ ಏಕೆ ಬಂಧಿಸಿಲ್ಲ? ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣದಲ್ಲಿ ಪ್ರಜ್ವಲ್ ಮಾಜಿ ಕಾರು ಚಾಲಕನಿಗೆ ನ್ಯಾಯಾಲಯ ಜಾಮೀನು ನಿರಾಕರಿಸಿದ್ದರೂ ಏಕೆ ಬಂಧಿಸಿಲ್ಲ? ಅವರಿಗೆ ಯಾಱರು ಬೇಕೋ ಅವರ ಮೇಲೆ ಆರೋಪ ಮಾಡುತ್ತಾರೆ. ಯಾರನ್ನು ವರ್ಗಾವಣೆ ಮಾಡಬೇಕೋ ಅದಕ್ಕೆ ಎಸ್ಐಟಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರ ಎಸ್ಐಟಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಈಗಾಗಲೇ ತಿಮಿಂಗಿಲ ಇದೆ ಎಂದು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ತಿಮಿಂಗಿಲ ಬಡಿದು ತಿಂದುಕೊಳ್ಳಲಿ ಎಂದು ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬಡಿದು ತಿನ್ನುವುದನ್ನು ದೇವೇಗೌಡರ ಕುಟುಂಬ ತೀರ್ಮಾನ ಮಾಡಬೇಕು. ದೇವೇಗೌಡರಿಗೆ ಈ ವಯಸ್ಸಿನಲ್ಲಿ ನೋವು ಕೊಡಬೇಕಿತ್ತಾ ಎಂದು ಒಕ್ಕಲಿಗ ಜನಾಂಗದವರು ಮಾತಾಡುತ್ತಿದ್ದಾರೆ. ಎಸ್ಐಟಿ ಪಾವಿತ್ರ್ಯತೆಯನ್ನು ಕಳೆದುಕೊಂಡಿದೆ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಹಾಗಾದರೆ ಕಾಂಗ್ರೆಸ್ ಕಾರ್ಯಕರ್ತರ ಮೊಬೈಲ್ಗಳಲ್ಲಿ ವೀಡಿಯೋ ಇಲ್ಲವೇ? ಅವರನ್ನು ಎಷ್ಟು ಜನರನ್ನು ಬಂಧಿಸಿದ್ದೀರರಿ? ಇದು ಕಾಂಗ್ರೆಸ್ನವರ ಮಾಸ್ಟರ್ ಪ್ಲಾನ್. ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮಟ್ಟದಲ್ಲಿ ಪ್ರಕರಣದ ಮಾನಿಟರ್ ಆಗುತ್ತಿದೆ ಎಂದು ಅವರು ಹೇಳಿದರು.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ʼನಲ್ಲೇ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಮತ್ತು ಪಕ್ಷದ ಒಳಗಿನ ಅಧಿಕಾರಕ್ಕಾಗಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...