ಸರ್ಕಾರ ಕೂಡ ಸಿರಿಧಾನ್ಯ ಮೇಳವನ್ನು ಪ್ರೋತ್ಸಾಹಿಸುತ್ತಿದೆ !

Date:

ಬೆಳಗಾವಿ: ಕೃಷಿ ಇಲಾಖೆ ವತಿಯಿಂದ ಬೆಳಗಾವಿ ಸುವರ್ಣ ಸೌಧದ ಬ್ಯಾಕ್ವೆಂಟ್ ಹಾಲ್ ನಲ್ಲಿ ಏರ್ಪಡಿಸಿದ್ದ ಸಿರಿಧಾನ್ಯ, ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮ ಅತ್ಯಂತ ಯಶ್ವಸಿಯಾಗಿ ನಡೆಯಿತು.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು..
ಆಧುನಿಕ ಜಗತ್ತಿನಲ್ಲಿ ಸಿರಿಧಾನ್ಯ ಹೆಚ್ಚು ಜನಪ್ರಿಯ ಹಾಗು ಲಾಭದಾಯಕವಾಗಿ ರೂಪುಗೊಂಡಿದೆ. ಸರ್ಕಾರ ಕೂಡ ಇದನ್ನು ಪ್ರೋತ್ಸಾಹಿಸುತ್ತಿದೆ.. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಇದನ್ನು ಬೆಳೆಯಬೇಕಿದೆ ಎಂದರು..ಸಿರಿಧಾನ್ಯ ಅತ್ಯಂತ ಆರೋಗ್ಯಪೂರ್ಣ ಆಹಾರವಾಗಿದ್ದು, ನಮ್ಮ ಪೂರ್ವಜರು ಇದನ್ನು ಬೆಳೆಸಿ, ಬಳಸುತ್ತಿದ್ದರು. ಒಂದು ಹಂತದಲ್ಲಿ ಬಹುಸಂಖ್ಯೆ ಜನರಿಂದ ದೂರ ಉಳಿದಿದ್ದ ಸಿರಿಧಾನ್ಯ ಇದೀಗ ಉಳ್ಳವರ ಪಾಲಿಗೂ ಫೆವರೇಟ್ ಆಗಿದೆ ಎಂದರು..
ಅತ್ಯಂತ ಕಡಿಮೆ ನೀರಿನಲ್ಲಿಯೂ ಬೆಳೆಯಬಹುದಾದ ಸಿರಿಧಾನ್ಯ ಆರ್ಥಿಕವಾಗಿಯೂ ವರದಾನವಾಗಬಲ್ಲದು ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, 2017 ರಲ್ಲಿ ತಾವು ಮುಖ್ಯಮಂತ್ರಿಯಾಗಿದ್ದಾಗ ಸಿರಿಧಾನ್ಯ ಮೇಳಕ್ಕೆ ನೀಡಿದ ಪ್ರೋತ್ಸಾಹ ಹಾಗು ಅದಕ್ಕೆ ರಾಷ್ಟ್ರ ಮಟ್ಟದಲ್ಲಿ ಸಿಕ್ಕ ಮನ್ನಣೆ ಸ್ಮರಿಸಿದರು…


ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ನುಡಿ ಆಡಿದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು 2024 ರ ಜನವರಿ 5 ರಿಂದ 7 ರವರೆಗೆ ಬೆಂಗಳೂರಿನ ಆರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅಂತರಾಷ್ಟ್ರೀಯ ಸಾವಯವ ಹಾಗು ಸಿರಿಧಾನ್ಯ ವಾಣಿಜ್ಯ ಮೇಳವನ್ನು ಆಯೋಜಿಸಲಾಗಿದೆ. ಅದಕ್ಕೆ ಪೂರ್ವಭಾವಿಯಾಗಿ ಇಂದಿನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು..

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...