ರಾಷ್ಟ್ರ ರಾಜಧಾನಿಯ ಅಶೋಕ ಹೋಟೆಲ್‌ನಲ್ಲಿ ಪ್ರಧಾನಿ ಅವರ ಔತಣಕೂಟ ನಡೆಯಲಿದೆ ಎಂದು ವರದಿಗಳು ತಿಳಿಸಿವೆ. ಪ್ರಧಾನಿ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲ ಸದಸ್ಯರಿಗೆ ಆಹ್ವಾನವನ್ನು ನೀಡಿದ್ದಾರೆ.
ಕಳೆದ ತಿಂಗಳು ಬಿಜೆಪಿ ನೇತೃತ್ವದ ಎನ್‌ಡಿಎ II ಸರ್ಕಾರ ರಚನೆಯಾದ ನಂತರ ಮೊದಲ ಬಾರಿಗೆ ಪ್ರಧಾನಿ ಎಲ್ಲ ಸಂಸದರನ್ನು ಭೇಟಿಯಾಗಲಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಎಲ್ಲಾ ರಾಜಕೀಯ ಪಕ್ಷಗಳ ಸಭೆಯಲ್ಲಿ `ಒಂದು ದೇಶ, ಒಂದು ಚುನಾವಣೆ ‘ಎಂಬ ವಿಚಾರ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ.