ಸಲಗಕ್ಕೆ ಸಾಥ್ ಕೊಡೋದಿಕ್ಕೆ ದುನಿಯಾ ವಿಜಿ ಜೊತೆ ಟಗರು ಟೀಂ !

Date:

‘ಸಲಗ’ ಸಿನಿಮಾ ಪ್ರಾರಂಭದಲ್ಲೆ ನಿಂತು ಹೋಯ್ತಾ  ಎನ್ನುವ ಮಾತು ಚಿತ್ರರಂಗದಲ್ಲಿ ಕೇಳಿ ಬರ್ತಾ ಇತ್ತು ಆದರೆ ಈಗ ಟಗರು ಖ್ಯಾತಿಯ ನಿರ್ಮಾಪಕ ಕೆ ಪಿ ಶ್ರೀಕಾಂತ್ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ಮತ್ತೆ ಪ್ರಾರಂಭ ಮಾಡಿದ್ದಾರೆ.

ದುನಿಯಾ ವಿಜಿ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ‘ಸಲಗ’ ಚಿತ್ರದಲ್ಲಿ ಬಹುತೇಕ ‘ಟಗರು’ ಚಿತ್ರದಲ್ಲಿ ಕೆಲಸ ಮಾಡಿದ್ದವರೆ ಇರಲಿದ್ದಾರೆ. ಕೆ ಪಿ ಶ್ರೀಕಾಂತ್ ಬಂಡವಾಳ ಹೂಡಿದ್ರೆ, ‘ಟಗರು’ ಚಿತ್ರದ ಸಹ ನಿರ್ದೇಶಕ ಅಭಿ, ಸಂಗೀತ ನಿರ್ದೇಶಕ ಚರಣ್ ರಾಜ್, ಸಂಭಾಷಣೆ ಬರೆದಿದ್ದ ಮಾಸ್ತಿ ‘ಸಲಗ’ ಚಿತ್ರದಲ್ಲೂ ಮುಂದುವರೆಯಲಿದ್ದಾರೆ. ಕಳೆದ ವರ್ಷ ‘ಟಗರು’ ಅಂತ ಬ್ಲಾಕ್ ಬಸ್ಟರ್ ಸಿನಿಮಾ ನೀಡಿದ್ದ ಈ ಟೀಂ ಈ ವರ್ಷದಲ್ಲಿ ಮತ್ತೊಂದು ಸೂಪರ್ ಹಿಟ್ ಸಿನಿಮಾ ಕೊಡುವ ತಯಾರಿಯಲ್ಲಿದ್ದಾರೆ.

 

‘ಸಲಗ’ನ ಜೊತೆ ಡಾಲಿ ಧನಂಜಯ್ ಫೈಟ್ ಮಾಡಲಿದ್ದಾರೆ. ‘ಟಗರು’ ಚಿತ್ರದಲ್ಲಿ ಶಿವಣ್ಣನಿಗೆ ಟಕ್ಕರ್ ಕೊಟ್ಟಿದ್ದ ಧನಂಜಯ್ ‘ಸಲಗ’ ಚಿತ್ರದಲ್ಲಿ ದುನಿಯಾ ವಿಜಿ ವಿರುದ್ಧ ತೊಡೆತಟ್ಟಲಿದ್ದಾರೆ. ಧನಂಜಯ್ ಜೊತೆಗೆ ‘ಟಗರು’ ಚಿತ್ರದಲ್ಲಿ ಕಾಕ್ರೋಚ್ ಪಾತ್ರದ ಮೂಲಕ ಖ್ಯಾತಿ ಗಳಿಸಿದ್ದ ನಟ ಸುಧಿ ಕೂಡ ಸಲಗ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸದ್ಯ ಚಿತ್ರದ ನಿರ್ಮಾಪಕ ಮತ್ತು ಸಂಗೀತ ನಿರ್ದೇಶಕ, ಸಂಭಾಷಣೆಗಾರ ಕೆಲವು ತಂತ್ರಜ್ಞನ ಬಗ್ಗೆ ಬಹಿರಂಗ ಪಡಿಸಿರುವ ‘ಸಲಗ’ ಟೀಂ ನಿರ್ದೇಶಕನ ಬಗ್ಗೆ ಮಾಹಿತಿ ನೀಡಿಲ್ಲ. ಆದ್ರೆ ಇನ್ನೊಂದು ವಾರದಲ್ಲೆ ನಿರ್ದೇಶಕನ ಬಗ್ಗೆ ಮಾಹಿತಿ ನೀಡಲಿದ್ದಾರಂತೆ. ಮುಂದಿನ ತಿಂಗಳು ಮೊದಲ ವಾರದಲ್ಲೆ ಮುಹೂರ್ತ ನಡೆಯಲಿದಂತೆ. ಮುಹೂರ್ತ ನಂತರ ಚಿತ್ರೀಕರಣ ಶುರುವಾಗಲಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...