ಬೆಳಗಾವಿ: ಸಹಕಾರಿ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ. ಇದರಿಂದ ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ.
ಬಿಜೆಪಿಯವರು 2018 ರ ತಮ್ಮ ಪ್ರಣಾಳಿಕೆಯಲ್ಲಿ ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರಿಕೃತ ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಬಿಜೆಪಿಯವರು ಈ ಕುರಿತು ಏನಾದರೂ ಮಾಡಿದರಾ? ನಯಾಪೈಸೆ ಬಿಡುಗಡೆ ಮಾಡಿದರಾ? ಹೇಳಿ. ಯಡಿಯೂರಪ್ಪನವರು 2019 ರ ಆಗಸ್ಟ್‌ನಲ್ಲಿ ಅತಿವೃಷ್ಟಿಯ ಕಾರಣಕ್ಕೆ ಬೆಳೆ ಹಾನಿಯಾಗಿತ್ತು. ಆಗ ಶಿವಮೊಗ್ಗದಲ್ಲಿ ಯಡಿಯೂರಪ್ಪನವರು ಏನು ಹೇಳಿದರು ಗೊತ್ತಾ? “ಕೇಳಿದಷ್ಟು ಹಣ ಕೊಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ” ಎಂದು ಹೇಳಿದ್ದರು.
ಸಹಕಾರಿ ಬ್ಯಾಂಕ್ʼಗಳ ಸಾಲದ ಮೇಲಿನ ಬಡ್ಡಿ ಮನ್ನಾ: ಸಿದ್ದರಾಮಯ್ಯ ಘೋಷಣೆ
Date: