ಸಾಕ್ಷ್ಯಾಧಾರಗಳ ಕೊರತೆ, ಬಿ ರಿಪೋರ್ಟ್ ಸಲ್ಲಿಕೆ: ಸೂರಜ್ ರೇವಣ್ಣಗೆ ಬಿಗ್ ರಿಲೀಫ್
ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಅನೈಸರ್ಗಿಕ ಲೈಂಗಿಕ ಕಿರುಕುಳ ಆರೋಪ ಕೇಸ್ ಸಂಬಂಧಿಸಿದಂತೆ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ. ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ನ್ಯಾಯಾಲಕ್ಕೆ ನ್ಯಾಯಾಲಕ್ಕೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಿಐಡಿಗೆ ವರ್ಗಾವಣೆ ಆಗಿತ್ತು. ಆರೋಪ ಸಾಬೀತುಪಡಿಸಲು ಬೇಕಾದ ಸಾಕ್ಷ್ಯಗಳು ಲಭ್ಯವಿಲ್ಲದ ಕಾರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯಕ್ಕೆ ಸಿಐಡಿ ಬಿ ರಿಪೋರ್ಟ್ ಸಲ್ಲಿಸಿದೆ.
ಸೂರಜ್ ರೇವಣ್ಣ ವಿರುದ್ಧ ಬ್ರಿಗೇಡ್ ಖಜಾಂಚಿ ನೀಡಿದ್ದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿಐಡಿ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.