ಸಾಲ ತೀರಿಸಲು ಮನೆ ಮಾಲಿಕಿಯನ್ನೆ ಕೊಲೆ ಮಾಡಿದ್ದ ಯುವತಿ ಬಂಧನ !

Date:

ಬೆಂಗಳೂರು: ಬೆಂಗಳೂರಿನ ಕೆಂಗೇರಿ ಠಾಣಾ ವ್ಯಾಪ್ತಿಯ ಒಂಟಿ ಮಹಿಳೆ ಕೊಲೆ ಪ್ರಕರಣವನ್ನು ಪೊಲೀಸರು ಬೇದಿಸಿದ್ದಾರೆ. ಈ ಸಂಬಂಧ 24 ವರ್ಷದ ಯುವತಿಯನ್ನು ಬಂಧಿಸಲಾಗಿದೆ. ಹೌದು ಸಾಲ ತೀರಿಸಲು ಮನೆ ಮಾಲಕಿಯನ್ನು ಹತ್ಯೆ ಮಾಡಿದ ಆರೋಪ ಮೇರೆಗೆ ಪೊಲೀಸರು ಯುವತಿಯೋರ್ವಗಳನ್ನು ಬಂಧನ ಮಾಡಿದ್ದಾರೆ. ಮೋನಿಕಾ (24) ಬಂಧಿತ ಆರೋಪಿ. ಮೇ 10 ರಂದು ಕೆಂಗೇರಿ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆಯ ಕೊಲೆ ನಡೆದಿತ್ತು.
ಕಂಪನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡಿದ್ದ ಮೋನಿಕಾ ಮೂಲತಃ ಕೋಲಾರ ಜಿಲ್ಲೆಯವಳಾಗಿದ್ದು, ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಈ ವೇಳೆ ಆಕೆ ಪ್ರಿಯಕರನನ್ನೇ ತನ್ನ ಗಂಡ ಎಂದು ಹೇಳಿ ಬಾಡಿಗೆ ಮನೆ ಗಿಟ್ಟಿಸಿದ್ದಳು. ಆದ್ರೆ ಒಬ್ಬಂಟಿಯಾಗಿ ವಾಸವಿದ್ದ ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ.
ಇತ್ತ ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳು. ಜೊತೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಲು ಹಣ ಬೇಕಾಗಿತ್ತು. ಹೀಗಾಗಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಮೋನಿಕಾ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ಶಾಪ್ ನಡೆಸುತ್ತಿದ್ದರು.
ದಿವ್ಯಾ ಅತ್ತೆ ಮಾವ ಸಹ ಬೆಳಗಾದ್ರೆ ಕೆಲಸಕ್ಕೆ ಹೋಗುತ್ತಿದ್ದರು. ದಿವ್ಯಾ ಹಾಗೂ ಆಕೆಯ 2 ವರ್ಷದ ಮಗು ಮಾತ್ರ ಮನೆಯಲ್ಲಿರುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದು ಕುತ್ತಿಗೆ ಹಿಸುಕಿ ಮೋನಿಕಾ ಕೊಲೆ ಮಾಡಿದ್ದಳು. ಕೊಲೆ ಮಾಡಿ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರ ಕಸಿದುಕೊಂಡುತ್ತಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...