No menu items!
23.4 C
Munich
Sunday, May 3, 2026

ಸಾವರ್ಜನೀಕರೇ ಗುಡ್‌ ನ್ಯೂಸ್:‌ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ!

Must read

ಸಾವರ್ಜನೀಕರೇ ಗುಡ್‌ ನ್ಯೂಸ್:‌ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ!

ಬೆಂಗಳೂರು: 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದೆ. ಬಹುತೇಕ ವಾಹನ ಮಾಲೀಕರು ಇನ್ನೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದ್ದು,
ಡಿಸೆಂಬರ್ 31ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30 ಕೊನೆ ದಿನಾಂಕವಾಗಿತ್ತು. ಇದೀಗ ಸಾರಿಗೆ ಇಲಾಖೆ ಈ ವರ್ಷದ ಕೊನೆಯ (ಡಿಸೆಂಬರ್ 31) ದಿನದ ವರೆಗೆ ಗಡುವು ನೀಡಿದೆ.
ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಗೊಳಿಸಲಾಗಿದೆ. ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಒಳಗೊಂಡಿರುವ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅನ್ನು ಕಡ್ಡಾಯಾವಾಗಿ ಅಳವಡಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

- Advertisement -spot_img

More articles

- Advertisement -spot_img

Latest article