ಸಾವಿರಾರು ಕೋಟಿ ಸಾಲದಲ್ಲಿರುವ ಏರ್ ಇಂಡಿಯಾ ಖರೀದಿಸಿದ ಟಾಟಾ

Date:

ಸಾಲದ ಭಾರಕ್ಕೆ ಕುಸಿಯುತ್ತಿರುವ ಏರ್ ಇಂಡಿಯಾದ ಉಕ್ಕಿನ ಹಕ್ಕಿಯ ಹೊಣೆಯನ್ನು ಯಾರು ಹೊತ್ತುಕೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಏರ್ ಇಂಡಿಯಾ ಕೊಳ್ಳಲು ಬಿಡ್ ಸಲ್ಲಿಸಿದ್ದ ಸಂಸ್ಥೆಗಳ ಪೈಕಿ ಟಾಟಾ ಸನ್ಸ್ ಹಾಗೂ ಸ್ಪೈಸ್ ಜೆಟ್ ಪ್ರಮುಖ ಸಂಸ್ಥೆಗಳಾಗಿವೆ. ಈ ಪೈಕಿ ಏರ್ ಇಂಡಿಯಾವನ್ನು ಖರೀದಿಸಲು ಸಲ್ಲಿಸಿದ್ದ ಫೈನಲ್ ಬಿಡ್ ಟಾಟಾ ಸಮೂಹ ಸಂಸ್ಥೆ ಪಾಲಾಗಿದೆ ಎಂಬ ಸುದ್ದಿ ಬಂದಿದೆ. ಅಧಿಕೃತ ಹೇಳಿಕೆ ಇನ್ನೂ ಪ್ರಕಟವಾಗಿಲ್ಲ. 1953ರ ಬಳಿಕ ಮತ್ತೊಮ್ಮೆ ಏರ್ ಇಂಡಿಯಾದ ಮೇಲೆ ಟಾಟಾ ಸಂಸ್ಥೆ ತನ್ನ ಹಿಡಿತ ಸಾಧಿಸುತ್ತಿದೆ. ಟಾಟಾ ವಿಸ್ತಾರದ ಭಾಗವಾಗಿ ಏರ್ ಇಂಡಿಯಾ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಸುಮಾರು 60,000 ಕೋಟಿ ರುಪಾಯಿಗೂ ಅಧಿಕ ಸಾಲದ ಹೊರೆ ಹೊತ್ತುಕೊಂಡಿರುವ ಏರ್ ಇಂಡಿಯಾ ಪುನಶ್ಚೇತನಕ್ಕಾಗಿ ಸರ್ಕಾರ ಇನ್ನಿಲ್ಲದ್ದಂತೆ ಯತ್ನಿಸಿ ಸೋತಿದೆ. ತನ್ನ ಪಾಲಿನ ಶೇಕಡಾ 76ರಷ್ಟು ಷೇರು ಮಾರಾಟಕ್ಕಿಟ್ಟರೂ ಖರೀದಿದಾರರು ಇಲ್ಲದ್ದಂತಾಗಿದೆ. ಏರ್ ಇಂಡಿಯಾ ಬದಲಿಗೆ ಜೆಟ್ ಏರ್ ಲೈನ್ಸ್ ಖರೀದಿಯತ್ತ ಟಾಟಾ ಸಮೂಹ ಸಂಸ್ಥೆ ಹೆಚ್ಚಿನ ಆಸಕ್ತಿ ವಹಿಸಿತ್ತು. ಆದರೆ ಈಗ ಟಾಟಾ ಸನ್ಸ್ ಚೇರ್ಮನ್ ಎನ್ ಚಂದ್ರಶೇಖರನ್ ಅವರು ಏರ್ ಇಂಡಿಯಾ ಖರೀದಿ ಪ್ರಕ್ರಿಯೆ ಬಗ್ಗೆ ಸುಳಿವು ನೀಡಿದ್ದರು.

ಈಗ ಏರ್ ಇಂಡಿಯಾ ಎಕ್ಸ್ ಪ್ರೆಸ್ ಲಿಮೆಟೆಡ್ 50% ಹಾಗೂ ಏರ್ ಇಂಡಿಯಾ SATS ಏರ್ ಪೋರ್ಟ್ ಸರ್ವೀಸ್ ಪ್ರೈ ಲಿ ಮತ್ತು ಏರ್ ಏಷ್ಯಾ ಇಂಡಿಯಾ ವಿಲೀನ ಎಲ್ಲವನ್ನು ಟಾಟಾ ತೆಕ್ಕೆಗೆ ನೀಡಬೇಕಾಗುತ್ತದೆ. 60 ಸಾವಿರ ಸಾಲ ಹೊರೆ ಇರುವ ವಿಮಾನಯಾನ ಸಂಸ್ಥೆ ಖರೀದಿಸುವ ಸಂಸ್ಥೆ 23, 286.5 ಕೋಟಿ ರು ಪಾವತಿಸಿ ಹಕ್ಕು ಪಡೆದುಕೊಳ್ಳಬಹುದು. ಮಿಕ್ಕ ಮೊತ್ತವನ್ನು ಏರ್ ಇಂಡಿಯಾ ಆಸ್ತಿ ಹೋಲ್ಡಿಂಗ್ ಲಿಮಿಟೆಡ್(AIAHL)ಗೆ ವರ್ಗಾವಣೆಯಾಗಲಿದೆ. ಆದರೆ, ಖರೀದಿ ಮೊತ್ತ ಇನ್ನೂ ಬಹಿರಂಗವಾಗಿಲ್ಲ.

Share post:

Subscribe

spot_imgspot_img

Popular

More like this
Related

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹ್ಯಾಂಡಸಮ್ ಟೀಚರ್ ಅಂಡ್...

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಬೆಂಗಳೂರು: ಬೆಂಗಳೂರು...

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...