ಸಿಆರ್‌ಪಿಎಫ್‌ ಯೋಧ ಸಾವು: ವೈದ್ಯರ ನಿರ್ಲಕ್ಷ್ಯ ಎಂದ ಕುಟುಂಬಸ್ಥರು!

Date:

ಸಿಆರ್‌ಪಿಎಫ್‌ ಯೋಧ ಸಾವು: ವೈದ್ಯರ ನಿರ್ಲಕ್ಷ್ಯ ಎಂದ ಕುಟುಂಬಸ್ಥರು!

ಹಾಸನ:- ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ಅನಾರೋಗ್ಯದಿಂದ ಸಿಆರ್‌ಪಿಎಫ್‌ ಯೋಧ ಸಾವನ್ನಪ್ಪಿರುವ ಘಟನೆ ಜರುಗಿದೆ.

39 ವರ್ಷದ ರವಿಶಂಕರ್.ಎಂ.ಆರ್‌. ಮೃತ ಯೋಧ ಎನ್ನಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ಯೋಧ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಜಮ್ಮುವಿನಲ್ಲಿ ಕರ್ತವ್ಯದಲ್ಲಿದ್ದ ಯೋಧ ರವಿಶಂಕರ್ ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿಯಿತ್ತು. ಅರಸೀಕೆರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದ ಯೋಧನ ವರದಿ ಸಂಗ್ರಹ ಒಂದು ವಾರದ ಹಿಂದೆ ಹೊಳೆನರಸೀಪುರಕ್ಕೆ ರವಿಶಂಕರ್ ಬಂದಿದ್ದರು.

ಇಂದು ಕರ್ತವ್ಯಕ್ಕೆ ತೆರಳಬೇಕಿದ್ದ ರವಿಶಂಕರ್‌ ಅವರಿಗೆ ಶುಕ್ರವಾರ ಜ್ವರ, ಸುಸ್ತು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಹೊಳೆನರಸೀಪುರ ತಾಲ್ಲೂಕು ಆಸ್ಪತ್ರೆಗೆ ತೆರಳಿದ್ದು ವೈದ್ಯರು ಸರಿಯಾಗಿ ತಪಾಸಣೆ ಮಾಡದೇ ಕೇವಲ ಮಾತ್ರೆ ನೀಡಿ ಕಳುಹಿಸಿದ್ದರು.

ಮನೆಗೆ ತೆರಳುತ್ತಿದ್ದಂತೆ ಯೋಧ ರವಿಶಂಕರ್.ಎಂ.ಆರ್. ಸಾವನ್ನಪ್ಪಿದ್ದಾರೆ. ಸರಿಯಾದ ಚಿಕಿತ್ಸೆ ನೀಡದೇ ವೈದ್ಯರು ನಿರ್ಲಕ್ಷ್ಯ ತೋರಿದ್ದು, ರವಿಶಂಕರ್ ಸಾವಿಗೆ ವೈದ್ಯನೇ ನೇರ ಕಾರಣ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ!

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ! ಹೃದಯಾಘಾತದಿಂದ ಹಿರಿಯ ರಂಗಭೂಮಿ...

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ ಅಬ್ಬರ

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ...

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..?

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..? ದಸರಾ,...

ನವರಾತ್ರಿ ಎಂಟನೇ ದಿನ – ಮಹಾಗೌರಿ !

ನವರಾತ್ರಿ ಎಂಟನೇ ದಿನ – ಮಹಾಗೌರಿ ! ದೇವಿಯ ಹಿನ್ನಲೆ ನವರಾತ್ರಿಯ ಎಂಟನೇ ದಿನ...