No menu items!
22.4 C
Munich
Tuesday, May 5, 2026

ಸಿಇಟಿ ಅಭ್ಯರ್ಥಿಗಳ ಜನಿವಾರ ತೆಗೆಸಿದ ಪ್ರಕರಣ: ಕಾಲೇಜು ಸಿಬ್ಬಂದಿ ಅಮಾನತು

Must read

ಸಿಇಟಿ ಅಭ್ಯರ್ಥಿಗಳ ಜನಿವಾರ ತೆಗೆಸಿದ ಪ್ರಕರಣ: ಕಾಲೇಜು ಸಿಬ್ಬಂದಿ ಅಮಾನತು

ಶಿವಮೊಗ್ಗ ಮತ್ತು ಬೀದರ್ನಲ್ಲಿ ಸಿಇಟಿ ಅಭ್ಯರ್ಥಿಗಳನ್ನು ಪರೀಕ್ಷೆ ಬರೆಯಲು ಕೊಠಡಿಗೆ ಕಳುಹಿಸುವಾಗ ತಪಾಸಣೆ ಮಾಡಿದ್ದ ಅಧಿಕಾರಿಗಳು ಜನಿವಾರ ಹಾಕಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲು ನಿರಾಕರಿಸಿದ್ದರು. ಹಲವು ವಿದ್ಯಾರ್ಥಿಗಳ ಜನಿವಾರ ಮತ್ತು ಕೈಯಲ್ಲಿದ್ದ ಕಾಶಿ ದಾರವನ್ನು ಬಿಚ್ಚಿಸಿದ್ದರು.
ಇದು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಇದೀಗ ಜನಿವಾರ ತೆಗಸಿರುವ ಹಾಗೂ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆಬೀದರ್ನ ಖಾಸಗಿ ಕಾಲೇಜಿನ ಪ್ರಾಂಶುಪಾಲ ಮತ್ತು ಆ ಕಾಲೇಜಿನ ಕೆಲವು ಸಿಬ್ಬಂದಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.
ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಯ ಜನಿವಾರ ತೆಗೆಸಿದ ಆರೋಪದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಕಾಲೇಜು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಪರೀಕ್ಷಾರ್ಥಿಗೆ ಪರೀಕ್ಷೆಗೆ ಅವಕಾಶ ನೀಡದ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಕೆ.ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ಬೀದರ್ ಜಿಲ್ಲಾಧಿಕಾರಿಯಿಂದ ವರದಿ ಸಲ್ಲಿಕೆ ಬೆನ್ನಲ್ಲೇ ಕ್ರಮ ಕೈಗೊಳ್ಳಲಾಗಿದೆ. ಬೀದರ್ನಲ್ಲಿರುವ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಚಂದ್ರಶೇಖರ ಬಿರಾದಾರ್ ಹಾಗೂ ಆ ಕಾಲೇಜಿನ ತಪಾಸಣಾ ಸಿಬ್ಬಂದಿ ಸತೀಶ್ ಪವಾರ್ ಅವರನ್ನು ಅಮಾನತು ಮಾಡಲಾಗಿದೆ.

- Advertisement -spot_img

More articles

- Advertisement -spot_img

Latest article