ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ

Date:

ಬೆಂಗಳೂರು: ಕೊರೊನಾ ಎರಡನೇ ಅಲೆ ಮಧ್ಯೆ ಶಿಕ್ಷಣ ಇಲಾಖೆ 2021ನೇ ಸಾಲಿನ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಾರಂಭ ಮಾಡಿದೆ. ಇಂದಿನಿಂದ ಜುಲೈ 10ರ ವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಆಗಸ್ಟ್ 28 ಮತ್ತು 29ರಂದು ಸಿಇಟಿ ಪರೀಕ್ಷೆ ನಡೆಸಲು ಕೆಇಎ ಈಗಾಗಲೇ ವೇಳಾಪಟ್ಟಿ ಪ್ರಕಟ ಮಾಡಿದೆ. ಹೀಗಾಗಿ ಇದೀಗ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಾಗಿದ್ದು, ಪರೀಕ್ಷೆ ಬರೆಯಲು ಆಸಕ್ತಿ ಇರುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಎಂಜಿನಿಯರಿಂಗ್, ಯೋಗ, ನ್ಯಾಚುರೋಪತಿ, ಬಿ-ಫಾರ್ಮ್, ಕೃಷಿ ವಿಜ್ಞಾನ, ವೆಟರಿನರಿ ಕೋರ್ಸ್ ಸೀಟು ಹಂಚಿಕೆಗೆ ರಾಜ್ಯ ಸರ್ಕಾರ ಸಿಇಟಿ ನಡೆಸುತ್ತದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೇಳಾಪಟ್ಟಿ ಹೀಗಿದೆ.

ಕೆಇಎ ವೇಳಾಪಟ್ಟಿ – ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ- ಜೂನ್ 15 ರಿಂದ ಜುಲೈ 10ವರೆಗೆ – ಆನ್‍ಲೈನ್ ಮೂಲಕ ಶುಲ್ಕ ಪಾವತಿಗೆ ಕೊನೆ ದಿನ- ಜುಲೈ 13 – ವಿಶೇಷ ಪ್ರವರ್ಗಗಳ ದಾಖಲಾತಿ ಸಲ್ಲಿಕೆ- ಜುಲೈ 14 ರಿಂದ ಜುಲೈ 20 – ಆನ್‍ಲೈನ್ ಅರ್ಜಿ ಮಾಹಿತಿ ತಿದ್ದುಪಡಿ- ಜುಲೈ 19 ರಿಂದ ಜುಲೈ 22 – ಸಿಇಟಿ ಪರೀಕ್ಷೆಗೆ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಳ್ಳುವುದು- ಆಗಸ್ಟ್ 13ರಿಂದ

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...