ಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ: ಈ ರೀತಿ ಸೂಚನೆ ಕೊಡಲು ನಾವು ಅವಿವೇಕಿಗಳಲ್ಲ – ಸಚಿವ ಎಂ.ಸಿ ಸುಧಾಕರ್

Date:

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ: ಈ ರೀತಿ ಸೂಚನೆ ಕೊಡಲು ನಾವು ಅವಿವೇಕಿಗಳಲ್ಲ – ಸಚಿವ ಎಂ.ಸಿ ಸುಧಾಕರ್

ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿದೆ. ಕೊನೆಯ ದಿನವಾದ ನಿನ್ನೆ, ಶಿವಮೊಗ್ಗ ಮತ್ತು ಬೀದರ್ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ ವೇಳೆ ಜನಿವಾರ ತೆಗೆದುಹಾಕುವಂತೆ ಸೂಚಿಸಿರೋದು ಭಾರೀ ವಿವಾದಕ್ಕೆ ಕಾರಣವಾಗಿದೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಪ್ರತಿಕ್ರಿಯೇ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಮತ್ತು ಬೀದರ್‌ನಲ್ಲಿಈ ರೀತಿ ಘಟನೆ ಆಗಿದೆ ಎಂದು ಬೆಳಗ್ಗೆ ನಮ್ಮ ಸ್ನೇಹಿತರು ಹೇಳಿದರು. ಇದರಲ್ಲಿ ಸ್ಥಳೀಯ ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ಇರುತ್ತದೆ. ಕೆಇಎಯಿಂದ ಜನಿವಾರ ತೆಗೆಸಿ ಬರೆಸುವಂತಹ ನಿಯಮ ಇಲ್ಲ ಎಂದರು.
ಶಿವಮೊಗ್ಗ ಎಡಿಸಿ ಜನಿವಾರ ತೆಗೆಸಿ ಪರೀಕ್ಷೆ ಬರೆಸಿಲ್ಲ ಎಂದು ಹೇಳುತ್ತಿದ್ದಾರೆ. ನಾನು ಸತ್ಯಾಸತ್ಯತೆ ತಿಳಿಯುತ್ತೇನೆ. ಈ ರೀತಿ ಸೂಚನೆ ಕೊಡಲು ನಾವು ಅವಿವೇಕಿಗಳಲ್ಲ. ಆ ರೀತಿ ಜನಿವಾರ ತೆಗೆಸಿದ್ದರೆ ಖಂಡಿತಾ ಕ್ರಮ ತೆಗೆದುಕೊಳ್ಳುತ್ತೇನೆ. ಇದರ ವರದಿಯನ್ನು ನಾನು ತರಿಸಿಕೊಳ್ಳುತ್ತೇನೆ. ಇದನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...