ಹಾಸನ: ಸಕಲೇಶ್ವರದಿಂದ ಗ್ರ್ಯಾವಿಟಿ ಮೂಲಕ ನೀರು ಹರಿಸುವ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಾಗರ ಗ್ರಾಮದಲ್ಲಿ ಪಂಪ್ ಹೌಸ್ ದ್ವಾರದಲ್ಲಿ ಟೇಪ್ ಕತ್ತರಿಸಿ ಸಿಎಂ ಸಿದ್ದರಾಮಯ್ಯ ಅವರು,
ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್ ಹಾಗೂ ಕೆ.ಎನ್ ರಾಜಣ್ಣ ಸೇರಿದಂತೆ ಹಲವು ಶಾಸಕರು ಸಾಥ್ ನೀಡಿದ್ದಾರೆ.