ತಮ್ಮ ಹುಟ್ಟೂರು ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬೂಕನಕೆರೆ ಗ್ರಾಮಕ್ಕೆ ಭೇಟಿ ನೀಡಲಿರುವ ಯಡಿಯೂರಪ್ಪ ಗ್ರಾಮದೇವತೆ ಗೋಗಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಮನೆದೇವರು ಕಾಪನಹಳ್ಳಿ ಗವಿಮಠದ ಸಿದ್ದಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಮೇಲುಕೋಟೆಗೆ ತೆರಳಲಿದ್ದಾರೆ.

ಅಲ್ಲಿಂದ ಮೇಲುಕೋಟೆಗೆ ತೆರಳಿ ಚೆಲುವನಾರಾಯಣ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಬಳಿಕ ಬೆಂಗಳೂರಿಗೆ ವಾಪಸ್ ಆಗಿ ಬಿಜೆಪಿ ವರಿಷ್ಠರ ಭೇಟಿಗೆ ದೆಹಲಿಗೆ ತೆರಳಲಿದ್ದಾರೆ. ಹುಟ್ಟೂರಿಗೆ ಯಡಿಯೂರಪ್ಪ ಆಗಮಿಸಲಿರುವ ಹಿನ್ನಲೆಯಲ್ಲಿ ಭರ್ಜರಿ ಸ್ವಾಗತ ನೀಡಲು ಬೆಂಬಲಿಗರು, ಕಾರ್ಯಕರ್ತರು ಅಭಿಮಾನಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.






