‘ಸಿಎಂ ದೊಂಬರಾಟ ಮಾಡೋದನ್ನ ಬಿಡಲಿ ಎಂದ ಬಿ ಎಸ್ ಯಡಿಯೂರಪ್ಪ !?

Date:

ಜಿಂದಾಲ್ ಗೆ ಭೂಮಿ ನೀಡುತ್ತಿರೋ ಸರ್ಕಾರ ಕಿಕ್ ಬ್ಯಾಕ್ ಪಡೆದುಕೊಂಡು ಭೂಮಿ ನೀಡುತ್ತಿದೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ನಾನು 13 ರಂದು ದೆಹಲಿಗೆ ಹೋಗಬೇಕಿದೆ. ಹೀಗಾಗಿ 14,15,16 ರಂದು ಧರಣಿ ಪ್ರತಿಭಟನೆ ನಡೆಸುತ್ತೇವೆ ಎಂದರು.
ನಾಡಿನಲ್ಲಿ ಬರ ತಾಂಡವವಾಡುತ್ತಿದೆ, ಹಳ್ಳಿಗಳಿಗೆ ಹೋದಾಗ ಸಮಸ್ಯೆಗಳನ್ನ ನೋಡಿದ್ರೆ ಕಣ್ಣಲ್ಲಿ ನೀರು ಬರುತ್ತೆ.

ಗ್ರಾಮ ವಾಸ್ತವ್ಯ ಅರ್ಥ ಹೀನಾವಾಗಿದ್ದು, ಸಿಎಂ ಕುಮಾರಸ್ವಾಮಿ ಒಂದು ಕಡೆಯೂ ಬರದ ಬಗ್ಗೆ ಕ್ರಮ ತೆಗೆದುಕೊಂಡಿಲ್ಲ.
ಕುಡಿಯೋ ನೀರಿನ ಸಮಸ್ಯೆ, ಶುದ್ಧ ಕುಡಿಯೋ ನೀರಿಗ ಘಟಕಗಳು 8೦% ಕೆಟ್ಟು ಹೋಗಿವೆ. ಮೂರುದಿನಗಳ ಸತ್ಯಾಗ್ರಹದಲ್ಲಿ ಶಾಸಕರು, ಸಂಸದರು ಎಲ್ಲರೂ ಭಾಗಿಯಾಗ್ತಾರೆ ಎಂದರು.

ಸರ್ಕಾರಕ್ಕೆ ಬಿಸಿ ಮುಟ್ಟಿಸೋ ಕೆಲಸ ಮಾಡಬೇಕಿದೆಗ್ರಾಮ ವಾಸ್ತವ್ಯ ಬಿಟ್ಟು, ಸಂಕಷ್ಟಗಳ ಬಗ್ಗೆ ತಿಳಿದುಕೊಂಡು ನಂತರ ಸಿಎಂ ಗ್ರಾಮ ವಾಸ್ತವ್ಯ ಮಾಡಲಿ. ದೊಂಬರಾಟ ಮಾಡೋದನ್ನ ಬಿಡಲಿ ಎಂದು ಸಿಎಂ ವಿರುದ್ಧ ಗರಂ ಆದರು.

ಸಿಎಂ ನಿರ್ಲಕ್ಷ್ಯದಿಂದಾಗಿ ಸರ್ಕಾರ ಬದುಕಿದ್ಯೋ ಸತ್ತಿದ್ಯೋ ಎಂಬ ಪರಿಸ್ಥಿತಿಯಲ್ಲಿದೆ. ಸಿಎಂ ಒಂದು ದಿನದ ಬರ ಪ್ರವಾಸ ಮಾಡಿಲ್ಲ. ಬರ, ರೈತರ ಸಾಲ ಮನ್ನಾ , ಜಿಂದಾಲ್ ಗೆ ಭೂಮಿ ನೀಡುತ್ತಿರೋ ವಿಚಾರ ನಾವು ಹೋರಾಟ ಮಾಡುತ್ತೇವೆ ಎಂದರು.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...