ಸಿಎಂ ನಿವಾಸಕ್ಕೆ ಆಗಮಿಸಿದ ಹರಿಪ್ರಸಾದ್: ರಾಜ್ಯ ರಾಜಕೀಯದಲ್ಲಿ ಹೆಚ್ಚಾಯ್ತು ಕುತೂಹಲ!

Date:

 

ಬೆಂಗಳೂರು:- ಎಐಸಿಸಿ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ವಾಪಸ್ ತೆರಳಿರುವ ಬೆನ್ನಲ್ಲೇ ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ತೆರಳಿದ ಹರಿಪ್ರಸಾದ್, ಕ್ಲೋಸ್ ಡೋರ್ ಮೀಟಿಂಗ್ ನಡೆಸಿದ್ದಾರೆ.

ಸದಾ ಸಿಎಂ ಸಿದ್ದರಾಮಯ್ಯರನ್ನು ಟೀಕಿಸುತ್ತಲೇ ಬಂದಿದ್ದ ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ ದಿಢೀರಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಒಂದು ವರ್ಷದ ನಂತರ ಉಭಯ ನಾಯಕರು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಕಾಂಗ್ರೆಸ್ ಪಾಳಯದಲ್ಲಿ ಅಚ್ಚರಿಗೆ ಕಾರಣವಾಗಿದೆ.

ಸುಮಾರು ಒಂದು ಗಂಟೆ ಕಾಲ ಉಭಯ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ. ವರ್ಷದ ಬಳಿಕ ಉಭಯ ನಾಯಕರು ಮುಖಾಮುಖಿಯಾಗಿ ಸುದೀರ್ಘ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ಕಳೆದ ವಾರವಷ್ಟೇ ಹರಿಪ್ರಸಾದ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆಗೆ ಸುದೀರ್ಘ ಮಾತುಕತೆ ನಡೆಸಿದ್ದರು. ಪಕ್ಷ ಹಾಗೂ ಸರ್ಕಾರದ ಪ್ರಮುಖ ಬೆಳವಣಿಗೆಗೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ಕೆಸಿ ವೇಣುಗೋಪಾಲ ಹಾಗೂ ಪ್ರಮುಖ ನಾಯಕರ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಮೈಸೂರಿನಲ್ಲಿ ಶುಕ್ರವಾರ ನಡೆಯಲಿರುವ ಜನಾಂದೋಲನ ಸಮಾವೇಶದ ವಿಚಾರವಾಗಿಯೂ ಇಬ್ಬರೂ ನಾಯಕರು ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಅಹಿಂದ ವಿಚಾರವಾಗಿ ಹರಿಪ್ರಸಾದ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿದ್ದರು. ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೂ ಸಿಎಂ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದರು.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...