ಸಿಎಂ ವರ್ಚಸ್ಸಿಗೆ ಧಕ್ಕೆ ತಂದು ಅಧಿಕಾರಕ್ಕೆ ಬರುವುದೇ ಬಿಜೆಪಿಯ ಮುಖ್ಯ ಗುರಿ: ಯತೀಂದ್ರ ಸಿದ್ದರಾಮಯ್ಯ
ಬೆಂಗಳೂರು: ಸಿಎಂ ವರ್ಚಸ್ಸಿಗೆ ಧಕ್ಕೆ ತಂದು ಅಧಿಕಾರಕ್ಕೆ ಬರುವುದೇ ಬಿಜೆಪಿಯ ಮುಖ್ಯ ಗುರಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ವರ್ಚಸ್ಸಿಗೆ ಧಕ್ಕೆ ತಂದು ಅಧಿಕಾರಕ್ಕೆ ಬರುವುದೇ ಬಿಜೆಪಿಯ ಮುಖ್ಯ ಗುರಿ.
ಅದಕ್ಕಾಗಿ ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವವನ್ನು ಕೊಲ್ಲುವ ಪ್ರಯತ್ನ ಮಾಡುತ್ತಿದ್ದಾರೆ. ಸಿಎಂ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸಿ, ಅವರ ಹೆಸರಿಗೆ ಮಸಿ ಬಳಿಯುವ ಯತ್ನದಲ್ಲಿದ್ದಾರೆ ಎಂದು ವಾಗಾಳಿ ನಡೆಸಿದ್ದಾರೆ.
ಇನ್ನೂ ಸಿಎಂ ಪತ್ನಿಗೆ ಸೇರಿದ ಜಮೀನಿನ ಮೇಲೆ ಮತ್ತೊಂದು ಪ್ರಕರಣ ದಾಖಲು ವಿಚಾರವಾಗಿ ಮಾತನಾಡಿ, ಈ ಪ್ರಕರಣ ಕೋರ್ಟ್‌ನಲ್ಲಿ ತೀರ್ಮಾನ ಆಗುತ್ತದೆ. ದೂರುದಾರರು ಇಷ್ಟು ವರ್ಷಗಳು ಸುಮ್ಮನ್ನಿದ್ದು, ಈಗ ಪ್ರಕರಣ ದಾಖಲಿಸಿದ್ದಾರೆ. ತಹಶೀಲ್ದಾರ್ ಮುಂದೆ ಒಪ್ಪಿಗೆ ಸೂಚಿಸಿ ದೇವರಾಜ್‌ಗೆ ಬರೆದುಕೊಟ್ಟಿದ್ದಾರೆ. ದೇವರಾಜ್ ತಪ್ಪು ಮಾಡಿದ್ದರೆ ಇದು ನಮ್ಮ ತಪ್ಪಲ್ಲ. ಕೋರ್ಟ್‌ನಲ್ಲಿಯೇ ಎಲ್ಲವೂ ತೀರ್ಮಾನ ಆಗುತ್ತದೆ ಎಂದು ಹೇಳಿದರು.