No menu items!
11 C
Munich
Tuesday, June 16, 2026

ಸಿಎಂ ಸಿದ್ದರಾಮಯ್ಯಗೆ ಶಾಕ್: ಮತ್ತೊಂದು ದೂರು ದಾಖಲು!

Must read

 

ಬೆಂಗಳೂರು: ಮುಡಾ ಹಗರಣದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯಗೆ ಮತ್ತೆಮತ್ತೆ ಸಂಕಷ್ಟ ಎದುರಾಗುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಎಂಬವರು ದೂರು ಸಲ್ಲಿಕೆ ಮಾಡಿದ್ದು,
ರಾಜ್ಯಪಾಲರ ಹೆಸರಿನಲ್ಲಿ ಅಕ್ರಮ ಪರಿತ್ಯಾಜನ ಪತ್ರ ನೋಂದಣಿ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಥಮ ದರ್ಜೆ ಸಹಾಯಕ ಕೆಸಿ ಉಮೇಶ್ ಎಂಬವರು ಪರಿತ್ಯಾಜನ ಪತ್ರ ನೋಂದಣಿ ಮಾಡಿಸಿಕೊಂಡಿದ್ದಾರೆ.
ಕೆಸರೆ ಗ್ರಾಮದ ಸರ್ವೆ ನಂ. 464ರ 3.16 ಎಕರೆ ಜಮೀನು ಸಂಬಂಧ ಪರಿತ್ಯಾಜನ ಪತ್ರ ನೋಂದಣಿ ಮಾಡಲಾಗಿದೆ. 25-11-2021ರಲ್ಲಿ ಅಕ್ರಮವಾಗಿ ನಿಮ್ಮ ಹೆಸರಿನಲ್ಲಿ ಪರಿತ್ಯಾಜನ ಪತ್ರ ನೋಂದಣಿ ಯಾಗಿದೆ. ಪಾರ್ವತಿಯವರು ನಿಮ್ಮ ಹೆಸರಿನಲ್ಲಿ ಪರಿತ್ಯಾಜನ ಪತ್ರ ಮಾಡಿಕೊಟ್ಟಿದ್ದಾರೆ. ಕೂಡಲೇ ಉಮೇಶ್ ಮತ್ತು ಇತರೆ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

- Advertisement -spot_img

More articles

- Advertisement -spot_img

Latest article