ಸಿಎಂ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಇಳಿಯಲು ತಯಾರಿಲ್ಲ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಇಳಿಯಲು ತಯಾರಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರ ಬಿಟ್ಟು ಇಳಿಯಲು ತಯಾರಿಲ್ಲ. ಆದರೆ ಡಿ.ಕೆ.ಶಿವಕುಮಾರ್ ಒಪ್ಪಂದದಂತೆ ಅಧಿಕಾರ ಕೊಡಿ ಅಂತ ಕೇಳ್ತಿದ್ದಾರೆ. ಕೆ
ಪಿಸಿಸಿ ಅಧ್ಯಕ್ಷರಿದ್ದಾಗ ಅವರಿಬ್ಬರ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ, ಡಿಕೆಶಿ ಇಬ್ಬರು ನೇರವಾಗಿ ಮಾತನಾಡಲು ತಯಾರಿಲ್ಲ. ಹೈಕಮಾಂಡ್ ಗೆ ಬಿಟ್ಟ ವಿಚಾರ ಅಂತ ಸಿದ್ದರಾಮಯ್ಯ ಹೇಳ್ತಾರೆ. ಹಾಗಾದ್ರೆ ಇಬ್ಬರ ನಡುವೆ ಏನೋ ನಡೆದಿದೆ ಅಂದಹಾಗಾಯ್ತು ಎಂದು ಲೇವಡಿ ಮಾಡಿದ್ದಾರೆ.
ಮುಖ್ಯಮಂತ್ರಿ ಆಯ್ಕೆ ಸಮಯದಲ್ಲಿ ಪವರ್ ಶೇರಿಂಗ್ ಮಾತುಕತೆ ಆಗಿತ್ತು. ಹೀಗಾಗಿ ಸಿಎಂ ಸ್ಥಾನ ಹಂಚಿಕೆ ತಡ ಆಯ್ತು. ಹೈಕಮಾಂಡ್ ನೇತೃತ್ವದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ. ಅದರ ಬಗ್ಗೆ ಬಹಿರಂಗವಾಗಿ ಹೇಳಲು ಯಾರಿಗೂ ಧೈರ್ಯ ಇಲ್ಲ ಎಂದರು.