ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಲ್ಲಿ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠವು ತೀರ್ಪು ಕಾಯ್ದರಿಸಿತ್ತು. ಕಳೆದ ಹತ್ತು ದಿನಗಳ ಹಿಂದೆ ವಾದ-ಪ್ರತಿವಾದವನ್ನು ಹೈಕೋರ್ಟ್ ಏಕಸದಸ್ಯ ಪೀಠ ಮುಕ್ತಾಯ ಮಾಡಿತ್ತು.
ಇಂದು ವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್, ದೂರುದಾರ ಟಿಜೆ ಅಬ್ರಾಹಂ ಕೋರ್ಟ್‌ಗೆ ಆಗಮಿಸಿದ್ದರು.
ಇನ್ನು ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೂರುದಾರ ಸ್ನೇಹಮಯಿಕೃಷ್ಣ ಪರ ಹಿರಿಯ ವಕೀಲ ಮಣೀಂಧರ್ ಸಿಂಗ್, ಹಿರಿಯ ವಕೀಲ ರಾಘವನ್ ಹಾಗೂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ , ಪ್ರದೀಪ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ ವಾದ ಮಂಡಿಸಿದ್ದರು.