ಬೆಂಗಳೂರು: ಸಿಎಂಗೆ ಯಾವುದೇ ಆತಂಕ ಇಲ್ಲ. ಅವರು ಮುಡಾ ವಿಚಾರದಲ್ಲಿ ಸ್ಪಷ್ಟವಾಗಿದ್ದಾರೆ. ಅವರ ತಪ್ಪು ಏನೂ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂಗೆ ಯಾವುದೇ ಆತಂಕ ಇಲ್ಲ. ಅವರು ಮುಡಾ ವಿಚಾರದಲ್ಲಿ ಸ್ಪಷ್ಟವಾಗಿದ್ದಾರೆ. ಅವರ ತಪ್ಪು ಏನೂ ಇಲ್ಲ.
ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅನ್ನೋದು ಅವರ ತಲೆಯಲ್ಲಿ ಸ್ಪಷ್ಟವಾಗಿದೆ. ಅದನ್ನೇ ಅವರು ಎಲ್ಲರಿಗೂ ಹೇಳ್ತಿದ್ದಾರೆ. ತಾವೇನೂ ಕಾನೂನು ಬಾಹಿರ ತಪ್ಪು ಮಾಡಿಲ್ಲ ಅಂತನೇ ಹೇಳಿದ್ದಾರೆ. ಸಿಎಂ ಆಗಿದ್ದಾಗಲೂ, ವಿಪಕ್ಷ ನಾಯಕ ಆಗಿದ್ದಾಗಲೂ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅಂತಾ ಅವರು ಹೇಳ್ತನೇ ಇದ್ದಾರೆ ಎಂದು ಸಿಎಂ ಪರ ಸಮರ್ಥನೆಯ ಮಾತುಗಳನ್ನು ಜಿ.ಪರಮೇಶ್ವರ್ ಹೇಳಿದ್ದಾರೆ.