ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ತಂದೆ , ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು. ತಪ್ಪು ಮಾಡಿದ್ದರೆ ಕರೆದು ಬುದ್ಧಿ ಹೇಳಬಹುದಿತ್ತು, ಅಥವಾ ಪೊಲೀಸರಿಗೆ ದೂರು ಕೊಡಬಹುದಿತ್ತು ಆದರೆ ಬರ್ಬರವಾಗಿ ಕೊಂದುಬಿಡುವುದು ಯಾವ ನ್ಯಾಯ ಎಂದು ಅವಲತ್ತುಕೊಂಡಿದ್ದಾರೆ. ಈ ವೇಳೆ ಸಿಎಂ ಸಾಂತ್ವಾನ ಹೇಳಿ, ಪೊಲೀಸ್ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ಪೊಲೀಸ್ ತನಿಖೆಯ ಬಗ್ಗೆ ರೇಣುಕಾಸ್ವಾಮಿ ಪೋಷಕರು ಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕುಟುಂಬಕ್ಕೆ, ಹೆಂಡತಿ ಮೊಮ್ಮಗುವಿಗೆ ಮುಂದೆ ಯಾರು ಗತಿ ಎಂದು ನೋವು ತೋಡಿಕೊಂಡ ಅವರು ತಮ್ಮ ಸೊಸೆ, ಅಂದರೆ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡುವಂತೆ ಮನವಿ ಮಾಡಿದ್ದಾರೆ. ಸಿಎಂ ಸಿಎ=ದ್ಧರಾಮಯ್ಯ ಇವರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಸಿಎಂ ಸಿದ್ದರಾಮಯ್ಯ ರನ್ನು ಭೇಟಿಯಾದ ರೇಣುಕಾಸ್ವಾಮಿ ಪೋಷಕರು..!
Date: