ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ

Date:

ಬೆಂಗಳೂರು: ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ನಡುವಿನ ಫೋನ್‌ ಸಂಭಾಷಣೆಯಲ್ಲಿ ಪ್ರಸ್ತಾಪಗೊಂಡಿದ್ದ ವಿವೇಕಾನಂದ ಎನ್ನುವ ಹೆಸರು ಕಳೆದ ರಾತ್ರಿ ಹೊರಬಿದ್ದ ಪೊಲೀಸ್‌ ಇನಸ್ಪೆಕ್ಟರ್‌ʼಗಳ ವರ್ಗಾವಣೆ ಪಟ್ಟಿಯಲ್ಲಿ ಪ್ರತ್ಯಕ್ಷವಾಗಿರುವುದಕ್ಕೆ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಟೀಕಾಪ್ರಹಾರ ನಡೆಸಿರುವ ಅವರು; ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಎಂದು ಪ್ರಶ್ನೆ ಮಾಡಿದ್ದಾರೆ.

ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ… ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!! ಡೂಪ್ಲಿಕೇಟ್‌ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ CSR ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? ʼಬರ್ಮುಡಾ ಟ್ರ್ಯಾಂಗಲ್‌ʼ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು.. ಅದು ನಿಮ್ಮ ದುರ್ವಿಧಿ. ಆನ್ಸರ್‌ ಮಾಡಿ ಸಿದ್ದರಾಮಯ್ಯನವರೇ..? ಎಂದು ಮಾಜಿ ಮುಖ್ಯಮಂತ್ರಿಗಳು ಕಾಲೆಳೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...