ಸಿಎಂ ಸಿದ್ದು 5 ವರ್ಷ ಇರಬೇಕಂದ್ರೆ ಲೋಕಸಭೆ ಎಲೆಕ್ಷನ್ʼನಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿ !

By
1 Min Read

ಹಾಸನ: ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಹೇಳಿದ್ದಾರೆ.
ಚುನಾವಣೆಗೂ ಮೊದಲು 5 ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಅವುಗಳನ್ನು ಜಾರಿಗೊಳಿಸಲಾಗಿದೆ. ಬಡವರು, ಶೋಷತರಿಗಾಗಿ ಕೆಲಸ ಮಾಡುವ ಹಂಬಲ ಕಾಂಗ್ರೆಸ್ಗೆ ಇದೆ. ಹಾಗಾಗಿ ನೀವೆಲ್ಲರೂ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು ಎಂದು ಯತೀಂದ್ರ ಕರೆ ನೀಡಿದ್ದಾರೆ.

Share This Article