No menu items!
24.7 C
Munich
Saturday, May 2, 2026

ಸಿಎಂ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ: ಡಿ.ಕೆ. ಶಿವಕುಮಾರ್

Must read

ಸಿಎಂ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ: ಡಿ.ಕೆ. ಶಿವಕುಮಾರ್

ಬೆಳಗಾವಿ: ಸಿಎಂ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಒಂದು ಪ್ರಕರಣ ಎಂದರೆ ಅದರ ತನಿಖೆ ಸುದೀರ್ಘ ಪ್ರಕ್ರಿಯೆಯಾಗಿದೆ. ಇಲ್ಲಿ ಅಕ್ರಮ ನಡೆದಿದೆಯೇ ಇಲ್ಲವೇ ಎಂದು ನ್ಯಾಯಾಲಯ ವಿಚಾರಣೆ ಮಾಡಬೇಕೆ ಹೊರತು, ನೀವು ನಾನು ವಿಚಾರಣೆ ಮಾಡುವಂತಹದಲ್ಲ.
ನಾನು ಇಡಿ ತನಿಖೆ ನೋಡಿದ್ದೇನೆ. ಈ ಪ್ರಕರಣದ ಬಗ್ಗೆ ನಾನು ಹೆಚ್ಚಿಗೆ ಏನು ಹೇಳುವುದಿಲ್ಲ. ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಮುಖ್ಯಮಂತ್ರಿಗಳಾಗಲಿ, ಅವರ ಧರ್ಮಪತ್ನಿ ಅವರಾಗಲಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ. ಈ ವಿಚಾರ ಬಿಟ್ಟು ರಾಜ್ಯದ ವಿಚಾರದ ಬಗ್ಗೆ ಗಮನಹರಿಸಿ” ಎಂದು ಶಿವಕುಮಾರ್ ತಿಳಿಸಿದರು.
ಇನ್ನೂ ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ” ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article