ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪ ತನಿಖೆ ಸಿಐಡಿಗೆ ಹಸ್ತಾಂತರ: ಜಿ ಪರಮೇಶ್ವರ್
ಹುಬ್ಬಳ್ಳಿ : ವಿಧಾನ ಪರಿಷತ್ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಪರಿಷತ್ ಸದಸ್ಯ ಸಿ ಟಿ ರವಿ ಅವರು ಅಶ್ಲೀಲ ಪದ ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧ ಪಟ್ಟಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,
ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ಇನ್ನೂ ಕೆಲವರು ಸಿಟಿ ರವಿ ಅವರು ಅಶ್ಲೀಲ ಪದ ಬಳಸಿಲ್ಲ ಅಂತ ಹೇಳಿದ್ದಾರೆ. ಹೀಗಾಗಿ, ಸತ್ಯಾಸತ್ಯತೆ ತಿಳಿಯಲು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ. ಸಭಾಪತಿ ತಮ್ಮ ಕೆಲಸ ಮಾಡಿದ್ದಾರೆ, ಪೊಲೀಸರು ತನಿಖೆ ಮಾಡಬೇಕು ಎಂದರು.
ಹಳೇಹುಬ್ಬಳ್ಳಿ ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಮಹಿಳಾ ಸಿಬ್ಬಂದಿ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ಬಳಿ ವರದಿ ತರಸಿಕೊಳ್ಳುತ್ತೇನೆ. ತಪ್ಪು ಮಾಡಿದ್ದೇರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.