ರಾಯಚೂರು:- ಗ್ರಾನೈಟ್ ಕ್ವಾರಿಯಲ್ಲಿ ಸಿಡಿಮದ್ದು ಜೋಡಿಸುವ ವೇಳೆ ಸ್ಫೋಟ ಸಂಭವಿಸಿ ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಾಕಾಪುರ ಬಳಿ ಜರುಗಿದೆ.
ಘಟನೆಯಲ್ಲಿ ಇನ್ನೋರ್ವನಿಗೆ ಗಂಭೀರ ಗಾಯಗಳಾಗಿವೆ. ಬಾಗಲಕೋಟೆಯ ಇಳಕಲ್‌ನ ವೆಂಕಟೇಶ (38) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗ್ರಾನೈಟ್ ಕ್ವಾರಿ ಅಕ್ರಮವಾಗಿ ನಡೆಯುತ್ತಿದ್ದು, ಘಟನೆ ಹೊರಗೆ ಬಾರದಂತೆ ಮೃತದೇಹವನ್ನ ಬಾಗಲಕೋಟೆಗೆ ರವಾನಿಸಲಾಗಿತ್ತು. ಈಗ ಮೃತದೇಹವನ್ನ ಮುದಗಲ್ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ.
ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.