ಸಿದ್ದಗಂಗಾ ಮಠಕ್ಕೆ ನೀಡಿದ್ದ ನೋಟಿಸ್ ವಾಪಸ್ ಪಡೆಯುತ್ತೇವೆ: ಸಚಿವ ಎಂಬಿ ಪಾಟೀಲ್
ಬೆಳಗಾವಿ: ಸಿದ್ದಗಂಗಾ ಮಠಕ್ಕೆ ನೀಡಿದ್ದ ನೋಟಿಸ್ ವಾಪಸ್ ಪಡೆಯುತ್ತೇವೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದಗಂಗಾ ಮಠಕ್ಕೆ ನೀಡಿದ್ದ ನೋಟಿಸ್ ವಾಪಸ್ ಪಡೆಯುತ್ತೇವೆ. ಅಧಿಕಾರಿಗಳ ತಪ್ಪು ಕಂಡು ಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠದ ಬಗ್ಗೆ ನಮಗೆಲ್ಲರಿಗೂ ಗೊತ್ತು. ಈಗಾಗಲೇ ನಾನು ಕೆಐಎಡಿಬಿ ಸಿಇಒಗೆ ಹೇಳಿದ್ದೇನೆ. ಸಿದ್ದಗಂಗಾ ಮಠದ ಸ್ವಾಮೀಜಿ ಜೊತೆಗೂ ಮಾತನಾಡುತ್ತೇನೆ. ಕೆಐಎಡಿಬಿ ವ್ಯಾಪ್ತಿಗೆ ಬರುವ ಕೆರೆ ನೀರನ್ನು ಬಳಸಿಕೊಂಡರೂ ಪರವಾಗಿಲ್ಲ ಎಂದು ಅವರು ಹೇಳಿದ್ದಾರೆ.
ಸಿದ್ದಗಂಗಾ ಮಠಕ್ಕೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುತ್ತೇವೆ. ಸಿದ್ದಗಂಗಾ ಮಠದ ಮೇಲೆ ಅಪಾರವಾದ ಗೌರವ ಇದೆ. ನೀರು ಬಳಕೆಯಾಗದೆ ನೋಟಿಸ್ ನೀಡಿದ್ದರೆ ಅಧಿಕಾರಿಯನ್ನ ಅಮಾನತು ಮಾಡುತ್ತೇವೆ ಎಂದಿದ್ದಾರೆ.