ಸಿದ್ದರಾಮನಹುಂಡಿ‌ಯಲ್ಲಿ ಮತದಾನ ಮಾಡಿದ ಸಿಎಂ ಸಿದ್ದರಾಮಯ್ಯ

By
1 Min Read

ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಉತ್ತಮವಾದ ವಾತಾವರಣ ಇದೆ ಎಂದು ಸಿದ್ದರಾಮನಹುಂಡಿ‌ಯಲ್ಲಿ ಮತದಾನ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಸಿದ್ದರಾಮನಹುಂಡಿ‌ಯಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, ನಿನ್ನೆ ಹಾಗೂ ಮೊನ್ನೆ 2ನೇ ಹಂತದ ಚುನಾವಣೆ ಇರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದೆ. ಈ ವೇಳೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಬೀದರ್ ಹಾಗೂ ಕಲಬುರಗಿ ಎರಡು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದರು.
14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗುಪ್ತ ಮತದಾನವಾಗಿದ್ದರಿಂದ ಎಷ್ಟು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬುದನ್ನು ಹೇಳೋಕೆ ಆಗಲ್ಲ. ಆದರೆ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತೇವೆ. ಚಾಮರಾಜನಗರ ಹಾಗೂ ಮೈಸೂರಿನಲ್ಲಿಯೂ ಗೆಲುವು ಸಾಧಿಸುತ್ತಾರೆ ಎಂದು ಸಿಎಂ ಹೇಳಿದರು.

Share This Article