ವಿಧಾನಸಭೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ಆಯ್ಕೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ, ಕೆಪಿಸಿಸಿ ಪದಾಧಿಕಾರಿಗಳ ಆಯ್ಕೆ ಕುರಿತಾಗಿ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಇಂದು ಹೈಕಮಾಂಡ್ ಸಭೆ ನಡೆಸಲಿದೆ.
ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಗುಲಾಮ್ ನಬಿ ಆಜಾದ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ರಾಜ್ಯಕ್ಕೆ ಆಗಮಿಸಲಿದ್ದಾರೆ. ಸಿದ್ದರಾಮಯ್ಯ ಅವರಿಗೆ ವಿರೋಧಪಕ್ಷದ ನಾಯಕ ಸ್ಥಾನ ತಪ್ಪಿಸಲು ವಿರೋಧಿಗಳು ಪ್ರಯತ್ನ ನಡೆಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಎನ್ನಲಾಗುತಿದೆ.