No menu items!
15 C
Munich
Friday, October 2, 2026

ಸಿದ್ದರಾಮಯ್ಯನವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ರಾಜೀನಾಮೆ ನೀಡಲಿ !

Must read

ಬೆಂಗಳೂರು: ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ. ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ಹಣ ಕಳ್ಳ ಕಾಕರ ನಶೆ ಏರಿಸುವ ಹೆಂಡ, ಸಾರಾಯಿ ಪಾಲಾಗಿದೆ ಎಂದರೆ ತಮ್ಮ ಕರುಳು ಕಿತ್ತುಬರುವುದಿಲ್ಲವೇ ಸಿಎಂ ಸಿದ್ದರಾಮಯ್ಯನವರೇ? ಇದೇನಾ ತಾವು ಪ್ರತಿಪಾದಿಸುವ ಸಾಮಾಜಿಕ ನ್ಯಾಯ? ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಪರಿಶಿಷ್ಟ ಪಂಗಡಗಳ ಜನರ ಕ್ಷೇಮ ಕೇಳಿ. ರಾಜೀನಾಮೆ ಕೊಟ್ಟು ಪ್ರಾಯಶ್ಚಿತ ಮಾಡಿಕೊಳ್ಳಿ. ದಲಿತ ಸಮುದಾಯ ನಿಮ್ಮ ದ್ರೋಹವನ್ನ ಯಾವತ್ತಿಗೂ ಕ್ಷಮಿಸುವುದಿಲ್ಲ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.

- Advertisement -spot_img

More articles

- Advertisement -spot_img

Latest article