ಸಿದ್ದರಾಮಯ್ಯನವರಿಗೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಯಾವುದೇ ರೀತಿಯ ಸಹಕಾರ ನೀಡುತ್ತಿಲ್ಲ. ಅವರ ಸರ್ವಾಧಿಕಾರಿ ಧೋರಣೆ ವಿರುದ್ದ ಎಲ್ಲರಿಗೂ ತಿರುಗಿಬಿದ್ದಿದ್ದಾರೆ ಹೀಗಾಗಿ ಕಾಂಗ್ರೆಸ್ ನಲ್ಲಿ ಒಳಗೊಳಗೆ ಕಿತ್ತಾಟಗಳು ನೆಡೆಯುತ್ತಿವೆ ಎಂದು ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಬಿ.ಕೆ.ಹರಿಪ್ರಸಾದ್, ಎಚ್.ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಡಾ.ಜಿ.ಪರಮೇಶ್ವರ್ ಸೇರಿದಂತೆ ಮೂಲ ಕಾಂಗ್ರೆಸಿಗರು ಎಲ್ಲಿದ್ದಾರೆ, ಯಾರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂಬುದು ಯಾರಿಗೂ ತಿಳಿಯುತ್ತಿಲ್ಲ. ಸಿದ್ದರಾಮಯ್ಯನವರ ದುರಾಹಂಕಾರವೇ ಇದಕ್ಕೆ ಕಾರಣ ಎಂದು ವಾಗ್ದಾಳಿ ನಡೆಸಿದರು.