ಸಿದ್ದರಾಮಯ್ಯರಿಂದ ಜಾತಿ ಗಣತಿ ವರದಿ ಕುರಿತು ದ್ವಂದ್ವ ನಿಲುವು !

Date:

ಬೆಂಗಳೂರು:- ಜಾತಿ ಗಣತಿ ವರದಿ ಬಗ್ಗೆ ಸಿಎಂ ದ್ವಂದ್ವ ನಿಲುವು ಪ್ರದರ್ಶಿಸುತ್ತಿದ್ದಾರೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಜಾತಿ ಗಣತಿ ವರದಿ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ದ್ವಂದ್ವ ನಿಲುವು ಪ್ರದರ್ಶಿಸುತ್ತಿದ್ದಾರೆ. ನಾನು ಜಾತಿ ಗಣತಿ ವರದಿಯ ಪರವಾಗಿದ್ದೇನೆ ಅಂತ ರಾಜಕೀಯ ಲಾಭ ಪಡೆಯಲು ಹೊರಟಿದ್ದಾರೆ” ಎಂದು ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದಾರೆ.
ಸಿಎಂ ಪದೇ ಪದೆ ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ವರದಿಯ ಸಾಧಕ, ಬಾಧಕಗಳ ಕುರಿತು ಚರ್ಚೆ ಆಗಬೇಕು. ಇದಕ್ಕೆ ಒಳ್ಳೆಯ ವೇದಿಕೆಯನ್ನು ಸರ್ಕಾರ ಕಲ್ಪಿಸಿಕೊಟ್ಟರೆ ಉತ್ತಮ” ಎಂದರು. ವರದಿ ಬಿಡುಗಡೆಗೆ ಮೊದಲೇ ಹಾಗಿದೆ, ಹೀಗಿದೆ ಅಂತ ಅಭಿಪ್ರಾಯ ಶುರುವಾಗಿದೆ. ಅವರ ಮಂತ್ರಿಗಳೇ ವರದಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಾಗಾದರೆ ವರದಿ ಸೋರಿಕೆ ಆಗಿದ್ದು ಹೇಗೆ?. ರಾಹುಲ್ ಗಾಂಧಿ ಹೇಳಿದ್ದಾರೆ ಅಂತ ವರದಿ ಪಡೆಯಲು ಮುಂದಾಗಿದ್ದಾರೆ. ವರದಿಯ ಚರ್ಚೆಗೆ ಅವಕಾಶ ಕೊಡಲಿ, ತಜ್ಞರ ಅಭಿಪ್ರಾಯ ಪಡೆದು ಸರ್ಕಾರ ಮುಂದುವರೆಯಲಿ. ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದ ಅವರು, ಇದು ಹಲವು ಅನುಮಾನಕ್ಕೆ ಎಡೆ ಮಾಡಿಕೊಡ್ತಿದೆ. ಹಿಂದುಳಿದ ವರ್ಗವನ್ನು ಕತ್ತಲಲ್ಲಿಡೋ ಕೆಲಸ ಮಾಡ್ತಿದ್ದಾರೆ. ಈ ವಿಚಾರ ಕೂಡಲೇ ಚರ್ಚೆಗೆ ಬರಲಿ” ಎಂದು ಒತ್ತಾಯಿಸಿದರು

Share post:

Subscribe

spot_imgspot_img

Popular

More like this
Related

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...

ನವರಾತ್ರಿಯ ಮೂರನೇ ದಿನ ದೇವಿ ಚಂದ್ರಘಂಟಾ !

ನವರಾತ್ರಿಯ ಮೂರನೇ ದಿನದಲ್ಲಿ ಪೂಜಿಸುವ ದೇವಿ ಚಂದ್ರಘಂಟಾ. ದೇವಿ ಚಂದ್ರಘಂಟಾ ಹೇಗಿದ್ದಾಳೆ...

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...