ಸಿದ್ದರಾಮಯ್ಯ ಅರೆಸ್ಟ್ ಆಗಬಹುದು: ಸ್ನೇಹಮಯಿ ಕೃಷ್ಣ ಪರ ವಕೀಲರ ಸ್ಪೋಟಕ ಹೇಳಿಕೆ!
ಬೆಂಗಳೂರು:- ಸಿದ್ದರಾಮಯ್ಯ ಅರೆಸ್ಟ್ ಆಗಬಹುದು ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ಸ್ಪೋಟಕ ಹೇಳಿಕೆ ಕೊಟ್ಟಿದ್ದಾರೆ.
ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ವಸಂತ ಕುಮಾರ್ ಪ್ರತಿಕ್ರಿಯಿಸಿದ್ದು, ಸಿಎಂ ಸ್ಥಾನದಲ್ಲಿ ಮುಂದುವರೆದರೆ ಪ್ರಾಮಾಣಿಕ ತನಿಖೆಯಾಗಲ್ಲ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಿದಾಗ ಎಫ್ಐಆರ್ ದಾಖಲಿಸಿ ತನಿಖೆ ಆಗಬೇಕು, ಅರೆಸ್ಟ್ ಕೂಡ ಮಾಡಬಹುದು ಎಂದು ಹೇಳಿದ್ದಾರೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಉತ್ತಮ ಆದೇಶ ಕೊಟ್ಟಿದೆ. ನಿನ್ನೆ ಹೈಕೋರ್ಟ್ ಕೊಟ್ಟ ತೀರ್ಪಿನ ಆದೇಶದ ಪ್ರತಿಯನ್ನು ನೀಡಿದ್ದೆವು. ಖಾಸಗಿ ದೂರಿಗೆ ನ್ಯಾಯ ಸಿಕ್ಕಿದೆ. 3 ತಿಂಗಳೊಳಗೆ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತಗೆ ಸೂಚನೆ ನೀಡಲಾಗಿದೆ. ಪ್ರಾಮಾಣಿಕವಾಗಿ ತನಿಖೆ ಆಗಬೇಕು ಅಂತಾ ಮನವಿ ಮಾಡುತ್ತೇವೆ ಎಂದಿದ್ದಾರೆ.
ಹೈಕೋರ್ಟ್ನಲ್ಲಿ ದಾವೆ ಹೂಡುತ್ತೇವೆ. ಆಪಾದನೆ ಬಂದಲ್ಲಿ ಅವರ ಮೇಲೆ ಎಫ್ಐಆರ್ ಆದರೆ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ಮಾಡುತ್ತಾರೆ. ಸಿಎಂ ರಾಜೀನಾಮೆ ಕೊಡಬೇಕಿದೆ. ತನಿಖಾಧಿಕಾರಿ ಯಾವ ರೀತಿ ಇರುತ್ತೆ ಅಂತ ನೋಡಬೇಕು ಎಂದು ಹೇಳಿದ್ದಾರೆ.