ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿ ನೇತೃತ್ವದಲ್ಲಿ ಇಂದು ರಾಜ್ಯ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದೆ. ಸಭೆಯಲ್ಲಿ ಪ್ರಮುಖವಾಗಿ ವಿಧಾನಸಭೆ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನ ಸ್ಥಾನ ಆಯ್ಕೆ ಕುರಿತು ಚರ್ಚೆ ನಡೆಯಲಿದೆ ಸಭೆಯಲ್ಲಿ ಸಿದ್ದರಾಮಯ್ಯ ಅವರ ಹೆಸರು ಬರುತ್ತಾ ಇಲ್ವಾ ಎಂಬ ಪ್ರಶ್ನೆ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ .
ವಿಧಾನಸಭೆ ವಿರೋಧಪಕ್ಷದ ನಾಯಕರಾಗಲು ಸಿದ್ದರಾಮಯ್ಯ ಅವರಿಗೆ ಕೆಲವು ಕಾಂಗ್ರೆಸ್ ನಾಯಕರು ಅಡ್ಡಿಯಾಗಿದ್ದಾರೆ. ಈಗಾಗಲೇ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಈ ಹಿಂದೆ ವಿಧಾನಸಭೆ ವಿರೋಧಪಕ್ಷದ ನಾಯಕರಾಗಿ, ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯರೂ ಆಗಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಲು ಅರ್ಹರಿದ್ದಾರೆ ಎಂದು ಹೇಳಲಾಗುತ್ತಿದೆ .