ಕಾಂಗ್ರೆಸ್ ವಲಯದಲ್ಲಿ ನಾಯಕ ಸ್ಥಾನಕ್ಕೆ ಯಾರು ಬರಬಹುದೆಂದು ಚರ್ಚೆ ನೆಡೆಯುತ್ತಿದೆ ಆದರೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇನ್ನೂ ಪ್ರತಿಪಕ್ಷ ನಾಯಕ ಸ್ಥಾನ ಸಿಕ್ಕಿಲ್ಲ. ಸಿಎಂ ಯಡಿಯೂರಪ್ಪ ರಾಜೀನಾಮೆ ಕೇಳುವ ಮೂಲಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಹಗಲುಗನಸು ಕಾಣುತ್ತಿದ್ದಾರೆ ಎಂದು ಈಶ್ವರಪ್ಪ ಅವರು ಟೀಕಿಸಿದ್ದಾರೆ.
ಸಿಎಂ ತಂತಿ ಮೇಲಿನ ನಡಿಗೆ ಹೇಳಿಕೆಯನ್ನು ಸಿದ್ಧರಾಮಯ್ಯ ಅಪಾರ್ಥ ಮಾಡಿಕೊಂಡಿದ್ದಾರೆ. ರಾಜ್ಯದ ಸಮಸ್ಯೆಗಳು, ಜನರ ಸಮಸ್ಯೆಗಳನ್ನು ನೋಡಿ ಸಿಎಂ ಹೇಳಿಕೆ ನೀಡಿದ್ದಾರೆ. ಅವರು ಭಾವನಾತ್ಮಕವಾಗಿ ಹೇಳಿಕೆ ನೀಡಿದ್ದನ್ನು ಸಿದ್ದರಾಮಯ್ಯ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.