ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ : ವಿಶ್ವನಾಥ್

Date:

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದಂತೆ. ಸದ್ಯ ರಾಜ್ಯದಲ್ಲಿ ಟ್ರಂಪಾಯಣದಂತೆ ಸಿದ್ದರಾಮಾಯಣ ನಡೆಯುತ್ತಿದೆ ಎಂದು ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದ ಹಾಗೆ. ತಮ್ಮ ಸೋಲನ್ನು ಒಪ್ಪಿಕೊಳ್ಳಲು ಅವರು ಸಿದ್ದರಿಲ್ಲ. ಸಿದ್ದು ಸಂಸ್ಕಾರ, ಸಂಸ್ಕೃತಿ ಇಲ್ಲದ ಮನುಷ್ಯ. ನಾವು ಅವರನ್ನು ಅಚಾನಕ್ ಆಗಿ ನಾವು ಕರೆದುಕೊಂಡು ಬಂದಿದ್ದಕ್ಕೆ ಅದೃಷ್ಟದಿಂದ ಸಿಎಂ ಆದವರು. ಸಿದ್ದರಾಮಯ್ಯ ಯಾರ ಯಶಸ್ಸನ್ನು ಸಹಿಸುವುದಿಲ್ಲ ಎಂದು ಕಿಡಿಕಾರಿದರು.
ತಮ್ಮ ಸಮುದಾಯದ ಸ್ವಾಮೀಜಿಯವರ ಹೋರಾಟವನ್ನು ಅವರು ಸಹಿಸುವುದಿಲ್ಲ. ಸಿದ್ದರಾಮಯ್ಯಗೆ ಸಿಎಂ ಪಟ್ಟ ಅಂದರೇ ತುಂಬಾ ಇಷ್ಟ. ಅವರೊಂದು ತರಹ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ. ಯಡಿಯೂರಪ್ಪ ನೋಡಿದ ಕೂಡಲೇ ಅವರಿಗೆ ಸಿಎಂ ಮಿಠಾಯಿ ನೆನಪಾಗುತ್ತದೆ. ಅದ‌ನ್ನು ಒಮ್ಮೆ ಪಡೆಯಬೇಕೆಂಬ ಚಡಪಡಿಕೆ ಶುರುವಾಗುತ್ತದೆ.. ಹೀಗಾಗಿ ನಾಯಕತ್ವದ ಬದಲಾವಣೆ ಬಗ್ಗೆ ಮಾತನಾಡುತ್ತಾರ ಅಷ್ಟೇ ಎಂದು ವ್ಯಂಗ್ಯವಾಡಿದರು.
ಸುಖಾಸುಮ್ಮನೇ ಸ್ವಾರ್ಥಕ್ಕಾಗಿ ಸಿದ್ದರಾಮಯ್ಯ ಹಿಂದ ಅಹಿಂದ ಎಂದು ಚಡಪಡಿಸುತ್ತಿದ್ದಾರೆ. ಅವರಿಗೆ ಅಸ್ತಿತ್ವ ಅಭದ್ರತೆ ಇತ್ತೀಚಿನ ದಿನದಲ್ಲಿ ಕಾಡತೊಡಗಿದೆ. ಕುರುಬ ಸಮಾಜದ ಎಸ್‌ಟಿ ಹೋರಾಟ ಅವರಿಲ್ಲದೆ ಯಶಸ್ವಿಯಾಗಿದೆ. ಲಕ್ಷಾಂತರ ಜನರನ್ನು ಸೇರಿಸಿ ಯಶಸ್ಸು ಕಂಡಿದ್ದೇವೆ. ಅವರು ಈ ಹೋರಾಟದಲ್ಲಿ ನಾನು ಇಲ್ಲದಿದ್ದರೆ ಆಗಲ್ಲ ಅಂದುಕೊಂಡಿದ್ದರು ಎಂದು ತಿಳಿಸಿದರು.
ಅವರಲ್ಲಿ ನಾನು ನಾನು ಅನ್ನೋ ಸ್ವಾರ್ಥ ಹೆಚ್ಚಿದೆ. ಕಾಂಗ್ರೆಸ್‌ ನಲ್ಲಿ ಡಿಕೆ ಶಿವಕುಮಾರ್ ನಾಯಕತ್ವ ಪ್ರಬಲವಾಗುತ್ತಿದೆ. ಪಕ್ಷ ಹಾಗೂ ಸಮುದಾಯ ಎರಡರಲ್ಲೂ ಸಿದ್ದು ಏಕಾಂಗಿಯಾಗುತ್ತಿದ್ದಾರೆ. ಇವೆಲ್ಲವನ್ನು ಗಮನಿಸುತ್ತಾ ಹೋದರೆ ರಾಜಕೀಯ ಅಸ್ತಿತ್ವಕ್ಕೆ ಚಡಪಡಿಕೆ ಶುರುವಾಗಿದೆ. ನಾನು ಸಿದ್ದರಾಮಯ್ಯ ಮೈಸೂರಿನಲ್ಲೇ ಓದಿದ್ದು. ಅವರು ಯಾವ ವಿದ್ಯಾರ್ಥಿ ಹೋರಾಟದಲ್ಲೂ ಹಿಂದೆ ಭಾಗಿಯಾಗಿರಲಿಲ್ಲ ಎಂದು ಹೇಳಿದರು.
ತಮ್ಮ ಅಭದ್ರತೆ ಮುಚ್ಚಿಕೊಳ್ಳಲು ಅಹಿಂದ ಬಳಸುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಬಿಟ್ಟು ಅಹಿಂದ ಹೋರಾಟ ನಡೆಸುತ್ತಿದ್ದಾರೆ ಅಷ್ಟೇ ಎಂದು ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...