ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲಿದ್ದೀರಪ್ಪಾ..? ಎಂದು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಕಾಲೆಳೆದಿದ್ದಾರೆ.
ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬಿಜೆಪಿಗೆ 25 ಲೋಕಸಭೆ ಕ್ಷೇತ್ರಗಳಲ್ಲಿ ಜನ ಆಶೀರ್ವಾದ ಮಾಡಿದ್ದಾರೆ. ಈಶ್ವರಪ್ಪನವರೇ ರಾಘವೇಂದ್ರರನ್ನು ಸೋಲಿಸುತ್ತಾರೆ ಎಂದು ನಿಂಬೆಹಣ್ಣು ರೇವಣ್ಣ ಹೇಳಿಕೆ ನೀಡಿದ್ದರು. ಬಿಜೆಪಿ ನನಗೆ ತಾಯಿ ಸಮಾನ. ಪಕ್ಷಕ್ಕೆ ದ್ರೋಹ ಮಾಡುವ ಅಭ್ಯಾಸ ನಮಗಿಲ್ಲ ಎಂದು ಈಶ್ವರಪ್ಪ ತಿಳಿಸಿದ್ದಾರೆ.
ಇಷ್ಟು ದಿನ ನಿಖಿಲ್ ಎಲ್ಲಿದ್ದೀಯಪ್ಪ ಎಂದು ಕೇಳುತ್ತಿದ್ದರು. ಈಗ ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲಿದ್ದೀರಾ ಎಂದು ಕೇಳುವಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಮರ್ಯಾದೆ ಇದ್ದರೆ ಸಿದ್ದರಾಮಯ್ಯ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ.ಮುಖ್ಯಮಂತ್ರಿ ಹುದ್ದೆಗೆ ಕುಮಾರಸ್ವಾಮಿ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ. ಚುನಾವಣೆ ವೇಳೆ ನಾನು ಮಾತನಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾ ಮಗನೆ ಸೋಲಿಸುತ್ತೇವೆ ಎಂದು ಸಿದ್ದರಾಮಯ್ಯನವರಿಗೆ ಹೇಳಿದ್ದಕ್ಕಾಗಿ ಕ್ಷಮೆ ಕೇಳುತ್ತೇನೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.