ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?
ಬೆಳಗಾವಿ: ಅಹಿಂದ ನಾಯಕತ್ವ ಇಲ್ಲದೇ ರಾಜಕಾರಣ ಮಾಡಲು ಆಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆಗೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮಾತನಾಡಿದ ಅವರು,
ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅಂತಿಮವಾಗಿ ಯಾರು ನಾಯಕತ್ವ ವಹಿಸಿಕೊಳ್ಳಬೇಕು ಅಂತಾ ಪಕ್ಷ, ಶಾಸಕರು ನಿರ್ಧಾರ ಮಾಡಬೇಕು. ಎಲ್ಲರನ್ನೂ ಜೊತೆಗೆ ಒಯ್ಯುವ ಪ್ರಯತ್ನ ಮಾಡುತ್ತಿದ್ದೇವೆ ಅಂತಿಮವಾಗಿ ಪಕ್ಷವೆ ನಿರ್ಧಾರ ಮಾಡಬೇಕು ಎಂದರು.
ಅಹಿಂದ ನಾಯಕತ್ವ ಇದ್ದೇ ಇದೆ. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ಹಿಂದೆಯೂ ಇದೆ. ಇವತ್ತೂ ಇದೆ. ನಾಳೆಯೂ ಕೂಡ ಇದ್ದೇ ಇರುತ್ತದೆ. ಅಹಿಂದ ನಾಯಕತ್ವ ಇಲ್ಲದೇ ರಾಜಕಾರಣ ಮಾಡಲು ಆಗುವುದಿಲ್ಲ. ಎಲ್ಲವನ್ನೂ ಇವತ್ತೆ ಜೋಡಿಸಲು ಆಗಲ್ಲ. ಅದಕ್ಕಾಗಿ ಕಾಯಬೇಕಾಗುತ್ತದೆ ಎಂದು ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟರು.