ಮಾಜಿ ಸಚಿವ ಜಿ.ಟಿ. ದೇವೇಗೌಡ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೋಗಲು ಕುಮಾರಸ್ವಾಮಿಯವರೇ ಹೇಳಿದ್ದರು ಎನ್ನುವ ಮೂಲಕ ಹೊಸ ಬಾಂಬ್ ಸಿಡಿಸಿದ್ದರ ಮಧ್ಯೆ ಇಂದು ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ.
ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ದೇವೇಗೌಡರ ಬೀಗರು ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ರಂಗಪ್ಪ, ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿ ಎಂದು ಹೇಳಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.ಮೈಸೂರಿನ ಬೋಗಾದಿಯಲ್ಲಿರುವ ಪ್ರೊ. ರಂಗಪ್ಪನವರ ನಿವಾಸಕ್ಕೆ ಇಂದು ಸಿದ್ದರಾಮಯ್ಯನವರು ಭೇಟಿ ನೀಡಿದ್ದು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರೊ.ರಂಗಪ್ಪ, ಈ ಸಂದರ್ಭದಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಇದೊಂದು ಸೌಹಾರ್ದಯುತ ಭೇಟಿ ಎಂದಿದ್ದಾರೆ.