ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವ ವಿಚಾರ ಇದೀಗ ಮುಗಿದ ಅಧ್ಯಾಯ, ಮುಂದಿನ ನಾಲ್ಕು ವರ್ಷ ಯಾವುದೇ ಬದಲಾವಣೆ ಇಲ್ಲ.
ಹೈಕಮಾಂಡ್ ಹೇಳಿದ್ದನ್ನು ಪಾಲಿಸಬೇಕು ಅಷ್ಟೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ನಿನ್ನೆ ನಡೆದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ವಿಚಾರ ಮಂಡನೆಯಾಗಿತ್ತು.
ಅಲ್ಲದೆ ಮುಖ್ಯಮಂತ್ರಿ ಕುಮಾರಮಿಯವರೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದಾಗಿ ಹೇಳಿದ್ದರು. ಆದರೆ,
ಅದಕ್ಕೆ ಸಭೆಯಲ್ಲಿ ಯಾವ ನಾಯಕರೂ ಕೂಡ ಒಪ್ಪಿಗೆ ಸೂಚಿಸಲಿಲ್ಲ ಕುಮಾರಸ್ವಾಮಿ ಅವರೇ ಸಿಂಎ ಸ್ಥಾನದಲ್ಲಿ ಮುಂದುವರಿಯಲು ಸಿದ್ದರಾಮಯ್ಯ ಅವರ ಸಂಪೂರ್ಣ ಬೆಂಬಲ ಇದೆ ಎಂದು ಸತೀಶ್ ಜಾರಕಿಹೊಳಿ ಈ ಸಮಯದಲ್ಲಿ ತಿಳಿಸಿದರು.